ನವದೆಹಲಿ: ಸಂಸತ್ತಿನಲ್ಲಿ ಕಲಾಪಗಳು ನಡೆಯದೇ ಇರುವುದನ್ನು ವಿರೋಧಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಎಪ್ರಿಲ್ 12ರಂದು ಒಂದು ದಿನದ ಉಪವಾಸ ಕೈಗೊಳ್ಳಲು ನಿರ್ಧರಿಸಿದ್ದಾರೆ.
ಬಜೆಟ್ ಅಧಿವೇಶನ ಎರಡನೇ ಹಂತ ಎಪ್ರಿಲ್ 6ರಂದು ಅಂತ್ಯಗೊಂಡಿದ್ದು, 121 ಗಂಟೆಗಳು ಸುಖಾಸುಮ್ಮನೆ ವ್ಯರ್ಥವಾಗಿವೆ. ಆಂಧ್ರಕ್ಕೆ ವಿಶೇಷ ಸ್ಥಾನಮಾನ, ಕಾವೇರಿ ವಿವಾದ ಸೇರಿದಂತೆ ಕಾಂಗ್ರೆಸ್ ಹಾಗೂ ಇತರ ಪಕ್ಷಗಳು ಗದ್ದಲವೆಬ್ಬಿಸಿ ಕಲಾಪಕ್ಕೆ ಅಡ್ಡಿಪಡಿಸಿದ್ದವು.
ಪ್ರತಿಪಕ್ಷಗಳ ಕ್ರಮದಿಂದ ಬೇಸರಗೊಂಡಿರುವ ಪ್ರಧಾನಿಗಳು ಪ್ರತಿಭಟನಾ ಸೂಚಕವಾಗಿಉಪವಾಸ ನಡೆಸುತ್ತಿದ್ದಾರೆ.
ಪ್ರಧಾನಿ ಮತ್ತು ಶಾ ಅವರೊಂದಿಗೆ ಬಿಜೆಪಿಯ ಎಲ್ಲಾ ಸಂಸದರು ಉಪವಾಸ ನಡೆಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.