ನವದೆಹಲಿ: ಇಂಧನ ವಲಯ ದೇಶದ ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸಲು ಇರುವ ಪ್ರಮುಖ ಎಂಜಿನ್ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.
16ನೇ ಇಂಟರ್ನ್ಯಾಷನಲ್ ಎನರ್ಜಿ ಫೋರಂ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ‘ತೈಲ ಮತ್ತು ಅನಿಲ ಕಾರ್ಯತಂತ್ರದ ಸರಕುಗಳು. ಇಂಧನ ನಮ್ಮ ಆರ್ಥಿಕ ಬೆಳವಣಿಗೆಯ ಪ್ರಮುಖ ಎಂಜಿನ್. ನಾವು ನವೀಕರಿಸಬಹುದಾದ ಇಂಧನದತ್ತ ಗಮನವಹಿಸುತ್ತಿದ್ದೇವೆ’ ಎಂದರು.
‘2016ರಲ್ಲಿ ಭಾರತ ಮತ್ತು ಫ್ರಾನ್ಸ್ ಜಂಟಿಯಾಗಿ ಇಂಟರ್ನ್ಯಾಷನಲ್ ಸೋಲಾರ್ ಅಲಯಾನ್ಸ್ ಸ್ಥಾಪನೆ ಮಾಡಿದ್ದು, ಜಾಗತಿಕ ಮಟ್ಟದಲ್ಲಿ ಸೋಲಾರ್ ಇಂಧನವನ್ನು ಪ್ರಚಾರಪಡಿಸಲು ಬಯಸುತ್ತಿದ್ದೇವೆ’ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.