ನವದೆಹಲಿ: ಹಣಕಾಸು ವಂಚನೆಗಳನ್ನು ಮಾಡಿ ವಿದೇಶಕ್ಕೆ ಪರಾರಿಯಾದವರ ಪಟ್ಟಿಯನ್ನು ಸಂಸತ್ತಿನ ಮುಂದೆ ಇಡುವುದಾಗಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ದಾದರ್ ನಗರ್ ಹವೇಲಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆಯನ್ನು ನೀಡಿ ಅವರು ಮಾತನಾಡಿದರು.
‘ವಿರೋಧ ಪಕ್ಷಗಳು ನೀರವ್ ಮೋದಿ, ಮೆಹೂಲ್ ಚೋಕ್ಸಿ ವಿದೇಶಕ್ಕೆ ಪರಾರಿಯಾದ ಬಗ್ಗೆ ನಮ್ಮ ಮೇಲೆ ಆರೋಪ ಮಾಡುತ್ತಿವೆ. ನಾವು ಓಡಿಹೋದ ಎಲ್ಲಾ ವಂಚಕರ ಪಟ್ಟಿಯನ್ನು ನೀಡುತ್ತೇವೆ. ಹಿಂದೆ ಹಣಕಾಸು ವಂಚನೆ ಮಾಡಿ ವಿದೇಶಕ್ಕೆ ಪರಾರಿಯಾದವರ ಆಸ್ತಿ ಮುಟ್ಟುಗೋಲು ಹಾಕುವ ಪ್ರಕ್ರಿಯೆಯನ್ನು ನಡೆಸಲಾಗಿಲ್ಲ. ಈಗ ಅವರ ಆಸ್ತಿಯನ್ನು ನಾವು ವಶಕ್ಕೆ ಪಡೆಯಲಿದ್ದೇವೆ’ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.