ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಿರುದ್ಧ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಸಲ್ಲಿಸಿದ್ದ ವಾಗ್ದಂಡನೆ ನಿಲುವಳಿಯನ್ನು ತಿರಸ್ಕಾರ ಮಾಡಿದ್ದಾರೆ.
ಉನ್ನತ ಕಾನೂನು ತಜ್ಞರೊಂದಿಗೆ ಮತ್ತು ಸಂವಿಧಾನ ತಜ್ಞರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಉಪ ರಾಷ್ಟ್ರಪತಿಗಳು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಿಶ್ರಾ ವಿರುದ್ಧ ವಾಗ್ದಂಡನೆ ವಿಧಿಸಲು ಕಾಂಗ್ರೆಸ್ ನೇತೃತ್ವದ ಪಕ್ಷಗಳು ನಿಲುವಳಿ ಸೂಚನೆಯನ್ನು ಸಲ್ಲಿಕೆ ಮಾಡಿದ್ದವು. ವಿಷಯದ ಗಂಭೀರತೆಯನ್ನು ಮನಗಂಡ ನಾಯ್ಡು ಅವರು ತಮ್ಮ ಹೈದರಾಬಾದ್ ಪ್ರವಾಸವನ್ನು ಮೊಟಕುಗೊಳಿಸಿ ಭಾನುವಾರ ದೆಹಲಿಗೆ ಆಗಮಿಸಿ ತಜ್ಞರೊಂದಿಗೆ ಸಭೆ ನಡೆಸಿದ್ದರು.
ಇಂದು ಅವರು ಪ್ರತಿಪಕ್ಷಗಳ ವಾಗ್ದಂಡನೆ ನಿಲುವಳಿ ಸೂಚನೆಯನ್ನು ತಿರಸ್ಕರಿಸಿದ್ದಾರೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.