ನವದೆಹಲಿ: ಭಾರತದ ಅತ್ಯುನ್ನತ ಖಾತೆಗಳ ಇಬ್ಬರು ಮಹಿಳಾ ಸಚಿವರು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಮಿಂಚುತ್ತಿದ್ದಾರೆ. ಪುರುಷ ಪ್ರಾಧಾನ್ಯತೆಯ ವಲಯದಲ್ಲಿ ಭಾರತವನ್ನು ಸಮರ್ಥವಾಗಿ ಪ್ರತಿನಿಧಿಸುತ್ತಿರುವ ಹೆಮ್ಮೆ ಅವರದ್ದು.
ಶಾಂಘೈ ಕೊಅಪರೇಶನ್ ಆರ್ಗನೈಜೇಶನ್ ನ ವಿದೇಶಾಂಗ ಮತ್ತು ರಕ್ಷಣಾ ಸಚಿವರ ಸಭೆಯಲ್ಲಿ ಸುಷ್ಮಾ ಸ್ವರಾಜ್ ಮತ್ತು ನಿರ್ಮಲಾ ಸೀತಾರಾಮನ್ ಅವರುಗಳು ಭಾಗಿಯಾದ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸುದ್ದಿ ಮಾಡುತ್ತಿದೆ.
ಪುರುಷರ ಗುಂಪಿನ ನಡುವೆ ಏಕೈಕ ಮಹಿಳೆಯರಾಗಿ ಇವರು ನಿಂತರೂ ಅವರಿಗೆ ಸರಿಸಮಾನವಾದ ಸಾಮರ್ಥ್ಯವನ್ನು ಹೊಂದಿ, ಭಾರತವನ್ನು ಸದೃಢವಾಗಿ ಪ್ರತಿನಿಧಿಸಿದ್ದಾರೆ.
ಈ ಎರಡು ಫೋಟೋಗಳನ್ನು ಟ್ವಿಟರ್ನಲ್ಲಿ ಶೇರ್ ಮಾಡಿಕೊಂಡಿರುವ ಕೇಂದ್ರ ಸಚಿವ ಪಿಯೂಶ್ ಗೋಯಲ್, ‘ಎಲ್ಲಿ ಮಹಿಳೆಯರು ಗೌರವಿಸಲ್ಪಡುತ್ತಾರೋ ಅಲ್ಲಿ ದೈವತ್ವ ಅರಳುತ್ತದೆ’ ಎಂದಿದ್ದಾರೆ. ಅಲ್ಲದೇ ‘ಎಸ್ಸಿಓನ ಸಂಪೂರ್ಣ ಪುರುಷ ವಿದೇಶಾಂಗ ಮತ್ತು ರಕ್ಷಣಾ ಸಚಿವರ ಸಭೆಯಲ್ಲಿ ಭಾರತದ ಸಚಿವೆಯರು ಮಿನುಗಿದ್ದಾರೆ’ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.