ಶಿವಮೊಗ್ಗ: ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಅವರು ಗುರುವಾರ ಶಿವಮೊಗ್ಗದ ಸಾಗರದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು.
ಕರ್ನಾಟಕದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಅವರು, ಸರ್ಕಾರ ಎಲ್ಲಾ ವಲಯದಲ್ಲೂ ವಿಫಲವಾಗಿದೆ ಎಂದು ಆರೋಪಿಸಿದರು.
‘ಉತ್ತರಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ನಿತಂತ್ರಣಕ್ಕೆ ಬಂದಿದೆ, ಆದರೆ ಇದು ಕರ್ನಾಟಕದಲ್ಲಿ ಹದಗೆಟ್ಟಿದೆ. ಹಿಂದೂ ಕಾರ್ಯಕರ್ತರ ನಿರಂತರ ಹತ್ಯೆಯಾದರೂ ಕ್ರಮಕೈಗೊಳ್ಳುವಲ್ಲಿ ಸರ್ಕಾರ ವೈಫಲ್ಯ ಕಂಡಿದೆ’ ಎಂದರು.
ಒಂದು ರಾಜ್ಯದ ಕಾನೂನು ಸುವ್ಯವಸ್ಥೆ ಆ ರಾಜ್ಯದಲ್ಲಿನ ಸರ್ಕಾರದ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದ ಅವರು, ಕಾಂಗ್ರೆಸ್ ಜಿಹಾದಿಗಳಿಗೆ ಆಶ್ರಯ ಕಲ್ಪಿಸುತ್ತಿದೆ ಎಂದು ಆರೋಪಿಸಿದರು.
ಕರ್ನಾಟಕದಲ್ಲಿ ಹಲವಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರಿಗೆ ನ್ಯಾಯ ದೊರಕಿಸಿಕೊಡಬೇಕಾಗಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.