ನವದೆಹಲಿ: ಮಹಿಳೆಯರ ವಿರುದ್ಧ ದೌರ್ಜನ್ಯಗಳನ್ನು ಹತ್ತಿರದ ಸಂಬಂಧಿಗಳು, ಸ್ನೇಹಿತರೇ ಮಾಡುತ್ತಿರುವುದರಿಂದ ಸರ್ಕಾರಿ ಏಜೆನ್ಸಿಗಳಿಗೆ ಮಹಿಳೆಯರ ವಿರುದ್ಧದ ಅಪರಾಧಗಳನ್ನು ಸಂಪೂರ್ಣ ನಿಲ್ಲಿಸಲು ಕಷ್ಟವಾಗುತ್ತಿದೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಮಹಿಳೆಯರ ಧಿರಿಸು ಅತ್ಯಾಚಾರಗಳಿಗೆ ಪ್ರಚೋದನೆ ನೀಡುತ್ತದೆ ಎಂಬ ವಾದವನ್ನು ಅವರು ತಳ್ಳಿ ಹಾಕಿದ್ದು, ಅತ್ಯಾಚಾರಕ್ಕೂ ಧಿರಿಸಿಗು ಸಂಬಂಧವಿಲ್ಲ ಎಂದಿದ್ದಾರೆ.
ಹೊರಗಡೆಗಿಂತ ಹೆಚ್ಚಾಗಿ ಮನೆಯ ಒಳಗಡೆಯೇ ಮಹಿಳೆ ದೌರ್ಜನ್ಯಕ್ಕೀಡಾಗುತ್ತಿದ್ದಾಳೆ. ಕುಟುಂಬ ಸದಸ್ಯರೇ ಇಂತಹ ಅಪರಾಧಗಳನ್ನು ಮಾಡುತ್ತಿರುವ ಸಂದರ್ಭದಲ್ಲಿ ಸರ್ಕಾರಿ ಏಜೆನ್ಸಿಗಳಿಗೆ ಇವುಗಳೊಂದಿಗೆ ಹೋರಾಡವುದು ತುಸು ಕಷ್ಟವಾಗುತ್ತಿದೆ ಎಂದರು.
ಮಹಿಳೆಯರ ಧಿರಿಸಿನಿಂದ ಅತ್ಯಾಚಾರವಾಗುತ್ತಿದೆ ಎಂಬುದನ್ನು ಒಪ್ಪಲು ಸಾಧ್ಯವಿಲ್ಲ, ಹಾಗದರೆ ವಯಸ್ಸಾದವರ ಮೇಲೆ, ಪುಟಾಣಿ ಮಕ್ಕಳ ಮೇಲೆ ಯಾಕೆ ಅತ್ಯಾಚಾರಗಳಾಗುತ್ತಿದೆ ಎಂದು ಅವರು ಪ್ರಶ್ನಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.