ಮಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಇಂದು ಮಧ್ಯಾಹ್ನ ಮಂಗಳೂರಿನಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ.
ಮಂಗಳೂರು ನಗರ ದಕ್ಷಿಣ ಮತ್ತು ಉತ್ತರ ಕ್ಷೇತ್ರದಲ್ಲಿ ಅವರು ಅಲ್ಲಿನ ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ಬೃಹತ್ ರೋಡ್ ಶೋ ಕಾರ್ಯಕ್ರಮವನ್ನು ಆಯೋಜನೆಗೊಳಿಸಿದ್ದಾರೆ.
ಮಧ್ಯಾಹ್ನ 12.45 ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು, 2.30ಕ್ಕೆ ಮಂಗಳೂರು ಕ್ಷೇತ್ರದ ಬಿಜೆಪಿ ಕಚೇರಿಯಿಂದ ತೊಕ್ಕೊಟ್ಟು ನಾಗ ಕಟ್ಟೆಯವರೆಗೆ ರೋಡ್ ಶೋ ನಡೆಸುತ್ತಾರೆ.
ಮಧ್ಯಾಹ್ನ 3.45ರಿಂದ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ನವಭಾರತ ವೃತ್ತದಿಂದ ಕಾರ್ ಸ್ಟ್ರೀಟ್ ಟೆಂಪಲ್ ಸ್ಕ್ವೇರ್ ವರೆಗೆ ರೋಡ್ ಶೋ ನಡೆಸಲಿದ್ದಾರೆ.
ಮಧ್ಯಾಹ್ನ 4.45ರಿಂದ ಮಂಗಳೂರು ನಗರ ಉತ್ತರ ಕ್ಷೇತ್ರದ ಬಿಜೆಪಿ ಕಛೇರಿಯಿಂದ ಮರಕಡದವರೆಗೆ ರೋಡ್ ಶೋ ನಡೆಸಲಿದ್ದಾರೆ.
ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಆಯಾಯ ಕ್ಷೇತ್ರದ ಪಕ್ಷದ ಕಾರ್ಯಕರ್ತರು, ಸದಸ್ಯರು, ಅಭಿಮಾನಿಗಳು ಮತ್ತುಸಾರ್ವಜನಿಕರುಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಚುನಾವಣಾ ಸಂಚಾಲಕರಾದ ಮೊನಪ್ಪ ಭಂಡಾರಿ, ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಗಣೇಶ್ಕಾರ್ನಿಕ್, ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.