ಚಾಮುಂಡೇಶ್ವರಿ: 2013ರ ವಿಧಾನಸಭಾ ಚುನಾವಣೆಯಲ್ಲಿ ಹೇಳಿದ್ದನ್ನೇ ಈ ಬಾರಿಯೂ ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಇದು ನನ್ನ ಕೊನೆಯ ಚುನಾವಣೆ ಎಂದಿದ್ದಾರೆ.
ಚಾಮುಂಡೇಶ್ವರಿಯಲ್ಲಿ ಚುನಾವಣಾ ಪ್ರಚಾರ ನಡೆಸುವ ವೇಳೆ ಅವರು ಈ ಮಾತನ್ನಾಡಿದ್ದಾರೆ.
‘ಇನ್ನು ಮುಂದೆ ಚುನಾವಣೆಗೆ ನಿಲ್ಲುವುದಿಲ್ಲ ಎಂದು ವಿಧಾನಸಭೆಯಲ್ಲಿ ಹೇಳಿದ್ದೆ, ಆದರೆ ಹೈಕಮಾಂಡ್ ಆದೇಶದಂತೆ ಸ್ಪರ್ಧಿಸಬೇಕಾಯಿತು’ ಎಂದಿದ್ದಾರೆ.
1983ರಲ್ಲಿ ಮೊದಲ ಬಾರಿಗೆ ಅವರು ಲೋಕ ದಳ ಪಕ್ಷದಲ್ಲಿ ಚುನಾವಣಾ ಅಕಾಡಕ್ಕೆ ಧುಮುಕಿದ್ದರು, 5 ಬಾರಿ ಚುನಾವಣೆ ಗೆದ್ದ ಅವರು, 2 ಬಾರಿ ಸೋತಿದ್ದಾರೆ.
ಈ ಬಾರಿ ಅವರು ಎರಡು ಕಡೆ, ವರುಣಾ ಮತ್ತು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.