ನವದೆಹಲಿ: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಇಂದು ನಡೆಯುತ್ತಿದೆ. ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಆರಂಭಗೊಂಡಿದ್ದು, ಜನ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರೂ ಕರ್ನಾಟಕ ಜನತೆಯಲ್ಲಿ ಮತದಾನ ಮಾಡುವಂತೆ ಕೋರಿ ಕನ್ನಡದಲ್ಲಿ ಟ್ವಿಟ್ ಮಾಡಿದ್ದಾರೆ.
‘ಕರ್ನಾಟಕದ ನನ್ನ ಸೋದರಿಯರೇ ಹಾಗೂ ಸೋದರರೇ ಇಂದು ಮತದಾನ ಮಾಡಿ. ಪ್ರಮುಖವಾಗಿ ಯುವ ಮತದಾರರು ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಂಡು ತಮ್ಮ ಹಕ್ಕು ಚಲಾಯಿಸಬೇಕೆಂದು ಕೋರುತ್ತೇನೆ’ ಎಂದಿದ್ದಾರೆ.
ಸಂಜೆ ಆರು ಗಂಟೆಯವರೆಗೂ ಮತದಾನ ನಡೆಯಲಿದ್ದು, ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗುವಂತೆ ಮಾಡುವ ಸಲುವಾಗಿ ಚುನಾವಣಾ ಆಯೋಗ ಹಲವಾರು ಕ್ರಮಗಳನ್ನು ಕೈಗೊಂಡಿದೆ.
ಕರ್ನಾಟಕದ ನನ್ನ ಸೋದರಿಯರೇ ಹಾಗೂ ಸೋದರರೇ, ಇಂದು ಮತದಾನ ಮಾಡಿ. ಪ್ರಮುಖವಾಗಿ ಯುವ ಮತದಾರರು ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಂಡು ತಮ್ಮ ಹಕ್ಕು ಚಲಾಯಿಸುವಂತೆ ಕೋರುತ್ತೇನೆ
— Narendra Modi (@narendramodi) May 12, 2018
Urging my sisters and brothers of Karnataka to vote in large numbers today. I would particularly like to call upon young voters to vote and enrich this festival of democracy with their participation.
— Narendra Modi (@narendramodi) May 12, 2018
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.