ತಮಕೂರು: 111 ವರ್ಷದ ಇಳಿ ವಯಸ್ಸಿನಲ್ಲೂ ಮತದಾನ ಮಾಡುವ ಮೂಲಕ ಸಿದ್ಧಗಂಗಾ ಮಠದ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರು ನಾಡಿನ ಎಲ್ಲಾ ನಾಗರಿಕರಿಗೂ ಆದರ್ಶರಾದರು. ಮತದಾನ ಎಷ್ಟು ಮುಖ್ಯ ಎಂಬುದನ್ನು ಸ್ವತಃ ಮತಚಲಾಯಿಸುವ ಮೂಲಕ ಅವರು ತೋರಿಸಿಕೊಟ್ಟಿದ್ದಾರೆ.
ತುಮಕೂರಿನ ಗ್ರಾಮಾಂತರ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ಅವರು ಸಿದ್ದಲಿಂಗೇಶ್ವರ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ತಮ್ಮ ಹಕ್ಕನ್ನು ಚಲಾಯಿಸಿದರು.
ಈ ವೇಳೆ ಮಾತನಾಡಿದ ಅವರು, ‘ನಾಡಿನ ಜನರು ಭಯವಿಲ್ಲದೆ ಮುಕ್ತ ಮತದಾನ ಮಾಡಿ, ಉತ್ತಮ ಅಭ್ಯರ್ಥಿಗಳನ್ನು ಆರಿಸಿ. ಈ ಚುನಾವಣೆಯಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದ್ದು, ಹೆಚ್ಚಿನ ಯುವಕರು ಮತದಾನದಲ್ಲಿ ಭಾಗವಹಿಸಿ’ ಎಂದರು.
ಶ್ರೀಗಳು 1951ರಲ್ಲಿ ನಡೆದ ಪ್ರಥಮ ಸಾರ್ವತ್ರಿಕ ಚುನಾವಣೆಯಲ್ಲಿ ಮೊದಲು ಮತ ಚಲಾವನೆ ಮಾಡಿದ್ದರು, ಇದುವರೆಗೆ ಅವರು ಒಟ್ಟು 15 ಲೋಕಸಭಾ ಮತ್ತು 14 ವಿಧಾನಸಭಾ ಚುನಾವಣೆಗಳಲ್ಲಿ ಮತ ಚಲಾಯಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.