ನವದೆಹಲಿ: ಯಾವುದೇ ವಿಶ್ವವಿದ್ಯಾಲಯಗಳು ಇನ್ನು ಮುಂದೆ ಪ್ಲಾಸ್ಟಿಕ್ ವಸ್ತುಗಳನ್ನು ಬಳಕೆ ಮಾಡುವಂತಿಲ್ಲ ಎಂದು ಯುಜಿಸಿ ಆದೇಶ ಹೊರಡಿಸಿದೆ. ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಈ ಮಹತ್ವದ ನಿರ್ಧಾರವನ್ನು ಅದು ತೆಗೆದುಕೊಂಡಿದೆ.
ಪ್ಲಾಸ್ಟಿಕ್ ಬ್ಯಾಗ್, ಪ್ಲಾಸ್ಟಿಕ್ ಬಾಟಲ್, ಕಪ್ಗಳು, ಆಹಾರದ ಪ್ಯಾಕೇಟ್, ಸ್ಟ್ರಾಗಳಿಗೆ ಸಂಪೂರ್ಣ ನಿಷೇಧವನ್ನು ಹೇರುವಂತೆ ಎಲ್ಲಾ ವಿಶ್ವವಿದ್ಯಾನಿಲಯಗಳಿಗೆ ಸ್ಪಷ್ಟ ಸೂಚನೆಯನ್ನು ನೀಡಲಾಗಿದೆ.
ಕೇಂದ್ರ ಪರಿಸರ ಸಚಿವಾಲಯದ ಆದೇಶದ ಅನ್ವಯ ಯುಜಿಸಿ ಈ ಸೂಚನೆಯನ್ನು ಹೊರಡಿಸಿದೆ. ವಿಶ್ವಸಂಸ್ಥೆಯ ನೇತೃತ್ವದಲ್ಲಿ ಈ ಬಾರಿ ಭಾರತದಲ್ಲೇ ವಿಶ್ವ ಪರಿಸರ ದಿನದ ಕಾರ್ಯಕ್ರಮಗಳು ಜರುಗಲಿದೆ.
ವಿಶ್ವವಿದ್ಯಾನಿಲಯಗಳು ಪ್ಲಾಸ್ಟಿಕ್ ನಿರ್ಮೂಲನೆ, ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸೂಚಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.