ನವದೆಹಲಿ: ಮುದ್ರಾ ಯೋಜನೆಯಡಿ ಸಣ್ಣ ಉದ್ಯಮಿಗಳಿಗೆ ಸಾಲ ಒದಗಿಸುವ ಸಲುವಾಗಿ ವಿತ್ತ ಸಚಿವಾಲಯವು ಫ್ಲಿಪ್ಕಾರ್ಟ್, ಸ್ವಿಗ್ಗಿ, ಪತಂಜಲಿ, ಅಮುಲ್ನಂತಹ ಅತೀದೊಡ್ಡ ಉದ್ಯೋಗ ಸೃಷ್ಟಿಸುವ 40 ಸಂಸ್ಥೆಗಳೊಂದಿಗೆ ಕೈಜೋಡಿಸಿದೆ.
ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ ಸಾಲವನ್ನು ಯಾರಿಗೆ ಒದಗಿಸಬಹುದು ಎಂಬುದನ್ನು ತಿಳಿದುಕೊಳ್ಳುವ ಸಲುವಾಗಿ ವಿತ್ತ ಸಚಿವಾಲಯವು ಮುಂಬಯಿಯಲ್ಲಿ ಮೇ.23ರಂದು ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂಬುದಾಗಿ ಆರ್ಥಿಕ ಸೇವಾ ಕಾರ್ಯದರ್ಶಿ ರಾಜೀವ್ ಕುಮಾರ್ ಹೇಳಿದ್ದಾರೆ.
ಒಟ್ಟು 40 ಕಂಪನಿಗಳನ್ನು ದೊಡ್ಡ ಉದ್ಯೋಗ ಸೃಷ್ಟಿಸುವ ಕಂಪನಿಗಳೆಂದು ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮುದ್ರಾ ಸಾಲ ಬೇಕಾದವರು ಬ್ಯಾಂಕ್ನ್ನು ಸಂಪರ್ಕಿಸುತ್ತಾರೆ, ಆದರೆ ಈ ಕಾರ್ಯಕ್ರಮದಡಿ ನಾವೇ ಸಾಲದ ಅವಶ್ಯಕತೆಯಿರುವವರನ್ನು ಸಂಪರ್ಕಿಸುತ್ತೇವೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.