ನವದೆಹಲಿ: ಒಂದು ವರ್ಷದಲ್ಲಿ ಬರುವ ವಿವಿಧ ರಾಜ್ಯಗಳ ಚುನಾವಣೆಗಳನ್ನು ಒಟ್ಟಿಗೆ ನಡೆಸುವ ಯೋಜನೆಯನ್ನು ಚುನಾವಣಾ ಆಯೋಗ ಮುಂದಿಟ್ಟಿದೆ. ಎಪ್ರಿಲ್ 24ರಂದು ಕಾನೂನು ಆಯೋಗಕ್ಕೆ ಬರೆದ ಪತ್ರದಲ್ಲಿ ಅದು ಈ ಬಗ್ಗೆ ಉಲ್ಲೇಖ ಮಾಡಿದೆ ಎಂದು ಮೂಲಗಳು ತಿಳಿಸಿವೆ.
ಎಲ್ಲಾ ರಾಜ್ಯಗಳ ಲೋಕಸಭಾ ಚುನಾವಣೆ ಮತ್ತು ವಿಧಾನಸಭಾ ಚುನಾವಣೆಗಳನ್ನು ಒಟ್ಟಿಗೆ ನಡೆಸುವ ‘ಒಂದು ವರ್ಷ, ಒಂದೇ ಚುನಾವಣೆ’ ಪದ್ಧತಿ ಜಾರಿಗೆ ತರುವುದು ಕಷ್ಟ. ಹೀಗಾಗಿ ‘ಒಂದು ವರ್ಷ, ಒಂದು ಚುನಾವಣೆ’ ನಿಯಮವನ್ನು ಜಾರಿಗೊಳಿಸುವುದು ಸೂಕ್ತ ಎಂದು ಚುನಾವಣಾ ಆಯೋಗ ಅಭಿಪ್ರಾಯಿಸಿದೆ ಎನ್ನಲಾಗಿದೆ.
ಒಂದು ವೇಳೆ ಇದು ಜಾರಿಯಾದರೆ 2019ರ ಆಸುಪಾಸಿನಲ್ಲ್ಲಿ ಚುನಾವಣೆ ಎದುರಿಸಲಿರುವ ರಾಜ್ಯಗಳ ಚುನಾವಣೆಯನ್ನು ಲೋಕಸಭಾ ಚುನಾವಣೆಯೊಂದಿಗೆಯೇ ಏಕಕಾಲಕ್ಕೆ ನಡೆಸಬೇಕಾಗುತ್ತದೆ.
ಏಕಕಾಲದಲ್ಲಿ ಚುನಾವಣೆ ನಡೆಸುವುದಕ್ಕೂ ಮುನ್ನ 5 ಸಾಂವಿಧಾನಿಕ, 15 ಸಮಾಜಿಕ, ರಾಜಕೀಯ ಮತ್ತು ಆರ್ಥಿಕ ವಿಷಯಗಳ ಸವಾಲುಗಳನ್ನು ನಿವಾರಿಸಿಕೊಳ್ಳಬೇಕಾಗಿದೆ ಎಂದು ಚುನಾವಣಾ ಆಯೋಗ ವರದಿಯಲ್ಲಿ ತಿಳಿಸಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.