ನವದೆಹಲಿ: ಮಹಿಳೆಯರ ವಿರುದ್ಧ ನಿರಂತರ ದೌರ್ಜನ್ಯಗಳಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಇನ್ನೂ ಕಾರ್ಯಪ್ರವೃತ್ತವಾಗಿಲ್ಲ ಎಂಬ ಆರೋಪಗಳೂ ಕೇಳಿ ಬರುತ್ತಿವೆ. ಈ ಹಿನ್ನಲೆಯಲ್ಲಿ ಮಹಿಳಾ ಸುರಕ್ಷತೆಗೆ ಸಂಬಂಧಿಸಿದ ವಿಷಯಗಳನ್ನು ನಿಭಾಯಿಸುವ ಸಲುವಾಗಿ ಕೇಂದ್ರ ಗೃಹಸಚಿವಾಲಯವು ಹೊಸ ಘಟಕವನ್ನು ರಚನೆ ಮಾಡಿದೆ.
ಈ ಹೊಸ ಘಟಕವು ಸಂಬಂಧಿತ ಸಚಿವಾಲಯಗಳು, ಇಲಾಖೆಗಳು ಮತ್ತು ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ಮಹಿಳಾ ಸುರಕ್ಷತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಕಾರ್ಯನಿರ್ವಹಿಸಲಿದೆ ಎಂದು ಗೃಹಸಚಿವಾಲಯ ತಿಳಿಸಿದೆ.
ಹಿರಿಯ ಐಎಎಸ್ ಅಧಿಕಾರಿ ಪುಣ್ಯ ಸಲಿಲಾ ಶ್ರೀವಾಸ್ತವ್ ಅವರು ಜಂಟಿ ಕಾರ್ಯದರ್ಶಿಯಾಗಿ ಈ ಘಟಕವನ್ನು ನಿರ್ವಹಿಸಲಿದ್ದಾರೆ.
ಮಹಿಳೆಯರ, ಎಸ್ಎಟಿ/ಎಸ್ಸಿ, ಹಿರಿಯ ನಾಗರಿಕರು, ಮಕ್ಕಳ ವಿರುದ್ಧದ ಅಪರಾಧ, ಮಾನವ ಕಳ್ಳಸಾಗಾಣೆ, ಬಂಧೀಖಾನರ ಕಾನೂನು, ಬಂಧೀಖಾನೆ ಸುಧಾರಣೆ, ನಿರ್ಭಯಾ ಫಂಡ್ನಡಿಯಲ್ಲಿನ ಎಲ್ಲಾ ಯೋಜನೆಗಳನ್ನು ನೋಡಿಕೊಳ್ಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.