ನವದೆಹಲಿ: ಜೂನ್ 4ರಂದು ರಾಷ್ಟ್ರಪತಿ ಭವನದಲ್ಲಿ ಎರಡು ದಿನಗಳ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್ಗಳ ಕಾನ್ಫರೆನ್ಸ್ ಜರುಗಲಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್ ಇದರ ನೇತೃತ್ವವನ್ನು ವಹಿಸಲಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ನಡೆಯುತ್ತಿರುವ 49ನೇ ಕಾನ್ಫರೆನ್ಸ್ ಆಗಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದಲ್ಲಿ ನಡೆಯುತ್ತಿರುವ 2ನೇ ಕಾನ್ಫರೆನ್ಸ್ ಆಗಿದೆ. 1949ರಲ್ಲಿ ಮೊದಲ ಬಾರಿಗೆ ಇಲ್ಲಿ ಕಾನ್ಫರೆನ್ಸ್ ಜರುಗಿತ್ತು, ಇದರ ನೇತೃತ್ವವನ್ನು ಅಂದಿನ ಗವರ್ನರ್ ಜನರಲ್ ಆಫ್ ಇಂಡಿಯಾ ಸಿ.ರಾಜಗೋಪಾಲಾಚಾರಿ ವಹಿಸಿಕೊಂಡಿದ್ದರು.
ಜೂನ್ 4 ರಿಂದ ನಡೆಯಲಿರುವ ಕಾನ್ಫರೆನ್ಸ್ನಲ್ಲಿನ ವಿವಿಧ ಸೆಷನ್ಗಳನ್ನು ಹಲವಾರು ವಿಷಯಗಳ ಬಗ್ಗೆ ಚರ್ಚಿಸಲಾಗುತ್ತದೆ. ಉಪರಾಷ್ಟ್ರಪತಿ, ನೀತಿ ಆಯೋಗದ ಸಿಇಓ, ಪ್ರಧಾನ ಮಂತ್ರಿಗಳು ಇದರಲ್ಲಿ ಭಾಗವಹಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.