ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ರಾಜ್ಯಪಾಲರುಗಳ ಕಾನ್ಫರೆನ್ಸ್ ಆರಂಭಗೊಂಡಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್ ಇದಕ್ಕೆ ಚಾಲನೆ ನೀಡದರು. ಮುಖ್ಯ ಅತಿಥಿಗಳಾಗಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದಾರೆ.
ಎರಡು ದಿನಗಳ ಕಾಲ ಕಾನ್ಫರೆನ್ಸ್ ಜರುಗಲಿದ್ದು, ಎಲ್ಲಾ ರಾಜ್ಯಗಳ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್ಗಳು ಇದರಲ್ಲಿ ಭಾಗಿಯಾಗಲಿದ್ದಾರೆ. ರಾಷ್ಟ್ರಪತಿಗಳು ಇದರ ನೇತೃತ್ವ ವಹಿಸಿಕೊಂಡಿದ್ದಾರೆ.
1949ರ ಬಳಿಕ ರಾಷ್ಟ್ರಪತಿ ಭವನದಲ್ಲಿ ನಡೆಯುತ್ತಿರುವ ಮೊದಲ ಕಾನ್ಫರೆನ್ಸ್ ಇದಾಗಿದೆ. ಉಪರಾಷ್ಟ್ರಪತಿ, ನೀತಿ ಆಯೋಗ ಮುಖ್ಯಸ್ಥರು, ರಾಷ್ಟ್ರೀಯ ಭದ್ರತಾ ಸಲಹೆಗಾರರು ವಿವಿಧ ಸೆಷನ್ಸ್ಗಳಲ್ಲಿ ಪ್ರಾತಿಕ್ಷಿಕೆ ನೀಡಲಿದ್ದಾರೆ.
ಭಾರತ ಸರ್ಕಾರದ ಮಹತ್ವದ ಯೋಜನೆಗಳು, ಆಂತರಿಕ ಭದ್ರತೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿತವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.