ಜಮ್ಮು: ಅಮರನಾಥ ಯಾತ್ರೆಯ ಸಂದರ್ಭದಲ್ಲಿ ದಾಳಿ ನಡೆಸಲು ಯೋಜನೆ ರೂಪಿಸಿರುವ ಪಾಕಿಸ್ಥಾನಿ ಮೂಲದ ಸುಮಾರು 450 ಉಗ್ರರು ಭಾರತದೊಳಗೆ ನುಸುಳುವ ಅವಕಾಶಕ್ಕಾಗಿ ಹೊಂಚು ಹಾಕುತ್ತಿದ್ದಾರೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
ವಾಸ್ತವ ಗಡಿರೇಖೆಯ ಸಮೀಪದ ಹಲವಾರು ಲಾಂಚ್ ಪ್ಯಾಡ್ಗಳ ಮೂಲಕ ಕಾಶ್ಮೀರದೊಳಗೆ ಪ್ರವೇಶಿಸಲು ಇವರು ಹೊಂಚು ಹಾಕುತ್ತಿದ್ದಾರೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
ಹಿಜ್ಬುಲ್ ಮುಜಾಹಿದ್ದೀನ್, ಲಷ್ಕರ್ ಇ ತೋಯ್ಬಾ ಉಗ್ರ ಸಂಘಟನೆಗಳಿಗೆ ಸೇರಿದ ಉಗ್ರರು ಅಮರನಾಥ ಯಾತ್ರೆಯನ್ನು ಟಾರ್ಗೆಟ್ ಮಾಡಿಕೊಂಡಿದ್ದಾರೆ. ಜೂನ್ 28ರಿಂದ ಯಾತ್ರೆ ಆರಂಭಗೊಳ್ಳಲಿದೆ.
ರಂಜಾನ್ ತಿಂಗಳಲ್ಲಿ ಭಾರತೀಯ ಸೇನಾಪಡೆಗಳು ಉಗ್ರರ ವಿರುದ್ಧ ಕಾರ್ಯಾಚರಣೆ ಸ್ಥಗಿತಗೊಳಿಸಿರುವುದರಿಂದ ಭಾರತದೊಳಗೆ ಪ್ರವೇಶಿಸಿ ದುಷ್ಕೃತ್ಯ ಎಸಗಲು ಉಗ್ರರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ ಎಂಬ ಎಚ್ಚರಿಕೆಯನ್ನು ಗುಪ್ತಚರ ಇಲಾಖೆ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.