ನವದೆಹಲಿ: ಸತತ 10ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಇಳಿಕೆಯಾಗಿದೆ. ಪ್ರಸ್ತುತ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ರೂ.77.42 ಇದೆ. ಡೀಸೆಲ್ ಬೆಲೆ ರೂ.68.58 ಇದೆ.
ಜೂನ್ 7-ಜೂನ್ 8ರ ನಡುವೆ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 21 ಪೈಸೆ ಕಡಿತಗೊಂಡಿದೆ. ಪ್ರತಿ ಲೀಟರ್ ಡೀಸೆಲ್ ಬೆಲೆ 15 ಪೈಸೆ ಕಡಿತಗೊಂಡಿದೆ. ಆದರೆ ಇದುವರೆಗೆ ಇಳಿಸಲಾದ ಒಟ್ಟಾರೆ ದರ 1 ರೂಪಾಯಿಯನ್ನೂ ತಲುಪಿಲ್ಲ.
ತೈಲದ ಮೇಲಿನ ಅಬಕಾರಿ ಸುಂಕವನ್ನು ಇಳಿಸದೆ ಬೇರೆ ವಿಧಾನದ ಮೂಲಕ ದರವನ್ನು ಇಳಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.