ನವದೆಹಲಿ: ಬಿಗ್ ಬಿ ಎಂದೇ ಖ್ಯಾತಿಗಳಿಸಿರುವ ಬಾಲಿವುಡ್ನ ಪ್ರಸಿದ್ಧ ನಟ ಅಮಿತಾಭ್ ಬಚ್ಚನ್ ಭಾರತೀಯ ಸೇನೆಯಲ್ಲಿ ಹುತಾತ್ಮರಾದ ಯೋಧರ ಕುಟುಂಬದ ಮಹಿಳೆಯರಿಗೆ ಹಾಗೂ ರೈತರ ಕಲ್ಯಾಣಕ್ಕಾಗಿ 2 ಕೋಟಿ ರೂ.ಗಳನ್ನು ದಾನವಾಗಿ ನೀಡಲಿದ್ದಾರೆ. ಈ ಮೊದಲು ಅಮಿತಾಭ್ ಅವರು ಅನೇಕ ಚಾರಿಟೇಬಲ್ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಪೊಲಿಯೋ, ಕ್ಷಯ, ಸ್ವಚ್ಛ ಭಾರತ ಸೇರಿದಂತೆ ಅನೇಕ ಸಾಮಾಜಿಕ ಕಳಕಳಿಯ ಪ್ರಚಾರ ಕಾರ್ಯಗಳಲ್ಲಿ ಪಾಲ್ಗೊಂಡಿದ್ದಾರೆ.
ಇದೀಗ ಅಮಿತಾಭ್ ಬಚ್ಚನ್ ಅವರು ಹುತಾತ್ಮರಾದ ಸೈನಿಕರ ಕುಟುಂಬಗಳಿಗೆ 1 ಕೋಟಿ ರೂ. ಮತ್ತು ರೈತರ ಸಾಲ ಮರುಪಾವತಿಗೆ ಸಹಾಯವಾಗುವಂತೆ 1 ಕೋಟಿ ರೂ. ಹಣವನ್ನು ನೀಡುತ್ತಿದ್ದಾರೆ ಎಂದು ವರದಿಗಳು ಹೇಳಿವೆ. ಈ ಹಣವನ್ನು ಅಗತ್ಯವಿರುವವರಿಗೆ ತಲುಪಿಸುವ ಭರವಸೆ ನೀಡುವಂತಹ ಅಧಿಕೃತ ಸಂಸ್ಥೆಗಳ ಮೂಲಕ ಫಲಾನುಭವಿಗಳನ್ನು ಗುರುತಿಸಿ ಪಟ್ಟಿ ಮಾಡಲು ಅನುಭವಿ ತಂಡವೊಂದನ್ನು ಆಯ್ಕೆ ಮಾಡಿದ್ದಾರೆ ಎಂದು ಹೇಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.