ನವದೆಹಲಿ: ನೆರೆ ಹಾಗೂ ಭೂಕುಸಿತಗಳಿಂದ ತತ್ತರಿಸಿರುವ ಆಂಧ್ರಪ್ರದೇಶ, ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್ಗಳಿಗೆ ಕೇಂದ್ರ ಸರ್ಕಾರ ವಿಪತ್ತು ಪರಿಹಾರ ನಿಧಿಯನ್ನು ಒದಗಿಸಲು ಸಮ್ಮತಿಸಿದೆ.
2017-18ರ ನಡುವೆ ಈ ಮೂರು ರಾಜ್ಯಗಳಲ್ಲಿ ನೆರೆ ಮತ್ತು ಭೂಕುಸಿತ ಸಂಭವಿಸಿ ಭಾರೀ ಹಾನಿಗಳಾಗಿವೆ. ಈ ರಾಜ್ಯಗಳಿಗೆ ಕೇಂದ್ರದ ನೆರವು ನೀಡುವ ಸಲುವಾಗಿ ಚರ್ಚಿಸಲು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಶುಕ್ರವಾರ ಉನ್ನತ ಮಟ್ಟದ ಸಭೆಯನ್ನು ನಡೆಸಲಾಗಿತ್ತು.
ಈ ಸಭೆಯಲ್ಲಿ ಆಂಧ್ರಕ್ಕೆ ರೂ 179.91 ಕೋಟಿ, ಅರುಣಾಚಲ ಪ್ರದೇಶಕ್ಕೆ ರೂ.144.26 ಕೋಟಿ, ನಾಗಾಲ್ಯಾಂಡ್ಗೆ ರೂ.65.69 ಕೋಟಿಯ ನೆರವು ನೀಡಲು ನಿರ್ಧರಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.