ಜೈಪುರ: ರಾಜಸ್ಥಾನ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಆ ಪಕ್ಷವನ್ನು ‘ಬೇಲ್ ಗಾಡಿ’ ಎಂದು ಜರೆದಿದ್ದಾರೆ.
ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಉದ್ದೇಶಿಸಿ ಅವರು ಜೈಪುರದಲ್ಲಿ ಮಾತನಾಡಿದರು.
ಕಾಂಗ್ರೆಸ್ ಪಕ್ಷದ ದೊಡ್ಡ ದೊಡ್ಡ ನಾಯಕರು ವಿವಿಧ ಪ್ರಕರಣಗಳಲ್ಲಿ ಜಾಮೀನು ಪಡೆದು ಹೊರಗಿದ್ದಾರೆ, ಹೀಗಾಗಿ ಇತ್ತೀಚಿಗೆ ಜನರು ಆ ಪಕ್ಷವನ್ನು ‘ಬೇಲ್ ಗಾಡಿ’ ಎಂದು ಕರೆಯಲು ಆರಂಭಿಸಿದ್ದಾರೆ ಎಂದರು.
ಕೇಂದ್ರದ ಉತ್ತಮ ಕಾರ್ಯವೇ ಇರಲಿ ಅಥವಾ ರಾಜಸ್ಥಾನ ಸಿಎಂ ವಸುಂಧರಾ ರಾಜೆ ಮಾಡಿದ ಉತ್ತಮ ಕಾರ್ಯವೇ ಇರಲಿ, ಅದನ್ನು ಶ್ಲಾಘಿಸುವ ಬುದ್ಧಿ ಕೆಲವರಿಗೆ ಇರುವುದಿಲ್ಲ ಎನ್ನುವ ಮೂಲಕ ಕಾಂಗ್ರೆಸ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.
ರಾಜಸ್ಥಾನದಲ್ಲಿ ಹಿಂದಿನ ಸರ್ಕಾರ ಏನು ಮಾಡಿದೆ ಎಂಬುದನ್ನು ಮರಿಯಬೇಡಿ ಎಂದು ಜನರಿಗೆ ಕರೆ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.