ಬೆಂಗಳೂರು: ಸಿಎಂ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ರಾಜ್ಯದ 40 ಸಂಸದರಿಗೆ ದುಬಾರಿ ಬೆಲೆ ಐಫೋನ್ ಮತ್ತು ಲೋಚಿ ಲೆದರ್ ಬ್ಯಾಗ್ ಉಡುಗೊರೆ ನೀಡಿದ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ. ರಾಜ್ಯದ ರೈತರು ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ ಇಂತಹ ಆಡಂಬರ ಸರ್ಕಾರಕ್ಕೆ ಬೇಕಿತ್ತಾ ಎಂದು ಪ್ರಜ್ಞಾವಂತ ನಾಗರಿಕರು ಪ್ರಶ್ನೆ ಎತ್ತಿದ್ದಾರೆ.
ಪ್ರತಿಪಕ್ಷ ಬಿಜೆಪಿ ಸಿಎಂ ಕ್ರಮವನ್ನು ತೀವ್ರವಾಗಿ ಖಂಡಿಸಿದ್ದು, ಉಡುಗೊರೆಯನ್ನು ವಾಪಾಸ್ ಮಾಡಲು ನಿರ್ಧರಿಸಿದೆ. ಎಲ್ಲಾ ಬಿಜೆಪಿ ಸಂಸದರು ತಮಗೆ ಸರ್ಕಾರ ಕಳುಹಿಸಿಕೊಟ್ಟಿರುವ ಐಫೋನ್ ಮತ್ತು ಲೆದರ್ ಬ್ಯಾಗ್ನ್ನು ಸರ್ಕಾರಕ್ಕೆಯೇ ವಾಪಾಸ್ ಮಾಡುತ್ತಿದ್ದಾರೆ.
ಕೇಂದ್ರ ಸಚಿವ ಅನಂತ್ಕುಮಾರ್ ಅವರೂ ತಮ್ಮ ಕಾರ್ಯಾಲಯಕ್ಕೆ ಕಳುಹಿಸಿಕೊಟ್ಟಿರುವ ಉಡುಗೊರೆಯನ್ನು ತಮ್ಮ ಕಾರ್ಯದರ್ಶಿಯ ಮೂಲಕ ವಾಪಾಸ್ ಮಾಡಿದ್ದಾರೆ. ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್ ಅವರೂ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು ಗಿಫ್ಟ್ನ್ನು ವಾಪಾಸ್ ಮಾಡಿದ್ದಾರೆ.
ಬಿಜೆಪಿಯ ಎಲ್ಲಾ ಸಂಸದರು ಒಬ್ಬರ ಹಿಂದೆ ಒಬ್ಬರಂತೆ ಉಡುಗೊರೆಯನ್ನು ಹಿಂದಿರುಗಿಸುತ್ತಿದ್ದಾರೆ. ಅಲ್ಲದೇ ಈ ರೀತಿಯ ಆಡಂಬರ ಮಾಡಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಬೇಡಿ ಎಂದು ಸರ್ಕಾರಕ್ಕೆ ಕಿವಿಮಾತು ಹೇಳುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.