ನವದೆಹಲಿ: ಭಾರತ ಸರ್ಕಾರ ಆರಂಭಿಸಿರುವ ‘ಸ್ಟಡಿ ಇನ್ ಇಂಡಿಯಾ’ ಯೋಜನೆಯಡಿ, ಯುದ್ಧ ಪೀಡಿತ ಸಿರಿಯಾ ರಾಷ್ಟ್ರದ ಸುಮಾರು 500 ವಿದ್ಯಾರ್ಥಿಗಳು ಭಾರತದ ವಿವಿಧ ಖಾಸಗಿ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ದಾಖಲಾಗುತ್ತಿದ್ದಾರೆ.
ದಕ್ಷಿಣ ಏಷ್ಯಾ, ಆಗ್ನೇಯ ಏಷ್ಯಾ ಮಧ್ಯ ಪೂರ್ವ ಮತ್ತು ಆಫ್ರಿಕಾ ದೇಶಗಳ ವಿದ್ಯಾರ್ಥಿಗಳನ್ನು ಭಾರತದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದಾಖಲು ಮಾಡಿಸುವ ನಿಟ್ಟಿನಲ್ಲಿ ಕಳೆದ ಎಪ್ರಿಲ್ನಲ್ಲಿ ಕೇಂದ್ರ ಸರ್ಕಾರ ಈ ಯೋಜನೆಯನ್ನು ಜಾರಿಗೊಳಿಸಿದೆ.
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ), ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎನ್ಐಟಿ), ದೆಹಲಿ ಯೂನಿವರ್ಸಿಟಿ, ಜವಾಹರ್ ಲಾಲ್ ಯೂನಿವರ್ಸಿಟಿ ಸೇರಿದಂತೆ ಹಲವಾರು ಸಂಸ್ಥೆಗಳಲ್ಲಿ ಸಿರಿಯಾ ಸೇರಿದಂತೆ ಇತರ ರಾಷ್ಟ್ರಗಳ ವಿದ್ಯಾರ್ಥಿಗಳು ದಾಖಲಾಗುತ್ತಿದ್ದಾರೆ.
ಸದ್ಯಕ್ಕೆ ಸಿರಿಯಾದ 94 ವಿದ್ಯಾರ್ಥಿಗಳು ಭಾರತದಲ್ಲಿ ಕಲಿಯುತ್ತಿದ್ದಾರೆ, ಆದರೆ ಈ ಬಾರಿ ದಾಖಲಾತಿ ಬಯಸುವವರ ಸಂಖ್ಯೆ 500ಕ್ಕೆ ಏರಿಕೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.