News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಎಪ್ರಿಲ್ 2 ರಂದು ಬಂಟರ ಯಾನೆ ನಾಡವರ ಮಾತೃ ಸಂಘದ ಬಹಿರಂಗ ಅಧಿವೇಶನ – ‘ಬಾಂಧವ್ಯ’

ಸಾಧಕರಿಗೆ ಸನ್ಮಾನ, ವಿಶ್ವ ಬಂಟರ ಮಾಹಿತಿ ಕೋಶ ಮಾಹಿತಿ ಸಂಗ್ರಹಣೆಗೆ ಚಾಲನೆ

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ (ರಿ.) ಬಂಟ್ಸ್ ಹಾಸ್ಟೆಲ್ ಮಂಗಳೂರು ಇದರ ಬಹಿರಂಗ ಅಧಿವೇಶನ ಕಾರ್ಯಕ್ರಮವು ಎಪ್ರಿಲ್ 2 ರಂದು ಗುರುವಾರ ಸಂಜೆ 3 ಗಂಟೆಗೆ ಬಂಟ್ಸ್ ಹಾಸ್ಟೆಲ್‌ನಲ್ಲಿ ಜರಗಲಿದೆ. ‘ಬಾಂಧವ್ಯ’ ಹೆಸರಿನಲ್ಲಿ ಜರಗುವ ಬಹಿರಂಗ ಅಧಿವೇಶನದಲ್ಲಿ, ‘ವಿಶ್ವ ಬಂಟರ ಮಾಹಿತಿ ಕೋಶ’ ಮಾಹಿತಿ ಸಂಗ್ರಹಣೆಗೆ ಚಾಲನೆ, ಸಾಧಕರಿಗೆ ಸನ್ಮಾನ, ವಿಕಲ ಚೇತನರಿಗೆ ಸಹಾಯ ಹಸ್ತ, ಪ್ರತಿಭಾ ಪುರಸ್ಕಾರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದೆ.

ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷರಾದ ಮಾಲಾಡಿ ಅಜಿತ್ ಕುಮಾರ್ ರೈಯವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಬಹಿರಂಗ ಅಧಿವೇಶನ ಮತ್ತು ‘ವಿಶ್ವ ಬಂಟರ ಮಾಹಿತಿ ಕೋಶ’ ಮಾಹಿತಿ ಸಂಗ್ರಹ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಓಂಪ್ರಕಾಶ್, ಐಪಿಎಸ್, ಡೈರೆಕ್ಟರ್ ಜನರಲ್ ಆಂಡ್ ಇನ್ಸ್‌ಪೆಕ್ಟರ್ ಅಫ್ ಪೊಲೀಸ್, ಕರ್ನಾಟಕ ಇವರು ನೆರವೇರಿಸಲಿದ್ದಾರೆ. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಎ.ಜೆ. ಸಮೂಹ ಸಂಸ್ಥೆಯ ಅಧ್ಯಕ್ಷ ಶ್ರೀ ಎ.ಜೆ. ಶೆಟ್ಟಿ, ಮುಂಬಯಿ ಬಂಟರ ಸಂಘದ ಅಧ್ಯಕ್ಷ ಶ್ರೀ ಕರ್ನಿರೆ ವಿಶ್ವನಾಥ ಶೆಟ್ಟಿ, ಬೆಂಗಳೂರು ಎಂ.ಆರ್.ಜಿ ಗ್ರೂಫ್ ಅಫ್ ಹೋಟೇಲ್ಸ್‌ನ ಎಂ.ಡಿ ಶ್ರೀ ಪ್ರಕಾಶ್ ಶೆಟ್ಟಿ, ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ|| ಎಂ. ಮೋಹನ್ ಆಳ್ವ, ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಡಾ. ನರೇಶ್ ಶೆಟ್ಟಿ, ಮುಂಬಯಿ ಬಂಟ್ಸ್ ಅಸೋಸಿಯೇಶನ್‌ನ ಅಧ್ಯಕ್ಷ ಶ್ರೀ ಶ್ಯಾಮ ಎನ್. ಶೆಟ್ಟಿ ಭಾಗವಹಿಸಲಿದ್ದಾರೆ.

bunts-pro

ನಶಿಸಿ ಹೋಗುತ್ತಿದ್ದ ನೂರಾರು ದೇವಸ್ಥಾನ, ದೈವಸ್ಥಾನ, ನಾಗಬನ, ಬ್ರಹ್ಮಸ್ಥಾನ, ಗರಡಿಗಳು, ಶಾಲೆಗಳು, ಕೆರೆಗಳು, ಆಲಯಗಳು, ಇವೆಲ್ಲವುಗಳ ನಿರ್ಮಾಣ, ಜೀರ್ಣೋದ್ಧಾರ ಹಾಗೂ ಪುನರ್ ನಿರ್ಮಾಣ, ಪುನರುತ್ಥಾನ ಮಾಡುವಲ್ಲಿ ಮಹತ್ವದ ಪಾತ್ರ ವಹಿಸಿರುವ ಸಮಾಜ ನಮ್ಮದು. ಇಂದು ನಶಿಸಿ ಹೋಗುತ್ತಿರುವ ನಮ್ಮ ಸಮಾಜ ಬಾಂಧವರೊಳಗಿನ ಬಾಂಧವ್ಯವನ್ನು ಪುನರುತ್ಥಾನ ಮಾಡುವ ಮಹೋನ್ನತ ಕಾರ್ಯವನ್ನು ಮಾಡುವ ನಿಟ್ಟಿನಲ್ಲಿ ‘ಬಾಂಧವ್ಯ’ ಎಂಬ ನಾಮಾಂಕಿತದೊಂದಿಗೆ ವಿಶ್ವವ್ಯಾಪಿಯಾಗಿ ನೆಲೆಸಿರುವ ಬಂಟರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಜೌದ್ಯೋಗಿಕ, ವೈವಾಹಿಕ, ಆರೋಗ್ಯ, ಕೃಷಿ, ವಸತಿ, ಸಾಂಸ್ಕೃತಿಕ ಹಾಗೂ ಒಟ್ಟು ಜೀವನದ ವ್ಯವಸ್ಥೆ, ಸ್ಥಿತಿಗತಿಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿ ದೂರಗಾಮಿ ಪರಿಣಾಮವನ್ನು ಬೀರುವ ವಿಶ್ವ ಬಂಟರ ಮಾಹಿತಿ ಕೋಶವನ್ನು ತಯಾರು ಮಾಡಲು ಮುಂದಡಿ ಇಟ್ಟಿದ್ದೇವೆ. ಮುಖ್ಯವಾಗಿ ವಿದ್ಯಾಭ್ಯಾಸ, ಉದ್ಯೋಗ, ವಧೂ-ವರರ ಅನ್ವೇಷಣೆ, ವೈದ್ಯಕೀಯ ಚಿಕಿತ್ಸೆ, ರಕ್ತದಾನ, ಅಂಗದಾನ, ಹಾಗೂ ಯಾವುದೇ ಸಮಸ್ಯೆ, ಸಂಕಷ್ಟದ ಸಮಯದಲ್ಲಿ ಸಹಾಯ ಅಥವಾ ಸಹಕಾರ ಪಡೆಯಲು, ವ್ಯಾಪಾರ ವ್ಯವಹಾರ, ಮಾರ್ಗದರ್ಶನ ಮಾಹಿತಿ ಪಡೆಯಲು ಈ ಮಾಹಿತಿ ಕೋಶವು ಖಂಡಿತವಾಗಿಯೂ ಉಪಯುಕ್ತವಾಗುತ್ತದೆ. ಸಹಾಯ ಸಹಕಾರದ ಅಗತ್ಯವಿರುವವರನ್ನು ಹಾಗೂ ಸಹಾಯ, ಸಹಕಾರ ನೀಡಲು ಶಕ್ತರಾಗಿರುವವರನ್ನು ಗುರುತಿಸುವ ಮೂಲಕ ಸಂಪರ್ಕ ಕೊಂಡಿಯಾಗಿ ಸುಖೀ ಸಮಾಜವನ್ನು ನಿರ್ಮಾಣ ಮಾಡುವ ಸದುದ್ದೇಶದೊಂದಿಗೆ ಕಾರ್ಯಪೃವತ್ತರಾಗಿದ್ದೇವೆ. ಒಂದು ಭವ್ಯ ಬಂಟ ಸಮಾಜಭವನದ ನಿರ್ಮಾಣ ಕಾರ್ಯವನ್ನು ಜೂನ್ ತಿಂಗಳ ನಂತರ ಪ್ರಾರಂಭಿಸಲಾಗುವುದು. ಸಮಾಜದ ಎಲ್ಲಾ ವರ್ಗದವರನ್ನು ಒಂದೇ ಸೂರಿನಡಿ ಸೇರಿಸಿ ಜಾಗತಿಕ ಬಂಟರ ಸಮ್ಮೇಳನವನ್ನು ಡಿಸೆಂಬರ್ ತಿಂಗಳಿನಲ್ಲಿ ನಡೆಸಲಾಗುವುದು.

ವಿಶ್ವವ್ಯಾಪಿಯಾಗಿ ನೆಲೆಸಿರುವ ಬಂಟ ಸಮಾಜ ಬಾಂಧವರನ್ನು ಒಗ್ಗೂಡಿಸುವ ಸಲುವಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮ -ಬಾಂಧವ್ಯ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ (ರಿ), ದ.ಕ ಅಧ್ಯಕ್ಷರಾದ  ಮಾಲಾಡಿ ಅಜಿತ್ ಕುಮಾರ್ ರೈ, ಉಪಾಧ್ಯಕ್ಷರಾದ ಕೆಂಚನೂರು ಸೋಮಶೇಖರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಮೇಘನಾಥ ಶೆಟ್ಟಿ, ಕೋಶಾಧಿಕಾರಿ ಸಿಎ. ಮನಮೋಹನ್ ಶೆಟ್ಟಿ ಹಾಗೂ ಜತೆ ಕಾರ್ಯದರ್ಶಿ ಕಾವು ಹೇಮನಾಥ ಶೆಟ್ಟಿ ಉಪಸ್ಥಿತರಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top