×
Home About Us Advertise With s Contact Us

ಪ.ಗೋ.ಪ್ರಶಸ್ತಿ ಪ್ರದಾನ ಸಮಾರಂಭ

Balakrishna-Shibarlaಮಂಗಳೂರು : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ 2014ನೇ ಸಾಲಿನ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಗೆ ವಿಜಯಕರ್ನಾಟಕ ಪತ್ರಿಕೆಯ ಉಡುಪಿಯ ವರದಿಗಾರ ಬಾಲಕೃಷ್ಣ ಶಿಬಾರ್ಲ ಆಯ್ಕೆಯಾಗಿದ್ದಾರೆ.

2014ರ ಜುಲೈ 31 ರಂದು ವಿಜಯಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ ನಕ್ಸಲ್, ಪೊಲೀಸ್ ಮಧ್ಯೆ ನಲುಗಿದವರು” ಅವರ ಈ ವರದಿಗೆ ಪ್ರಶಸ್ತಿ ಲಭಿಸಿದೆ.

ಪ್ರಶಸ್ತಿ ಪ್ರದಾನ ಸಮಾರಂಭ ಎಪ್ರಿಲ್ 7 ರಂದು ಮಂಗಳವಾರ ಬೆಳಗ್ಗೆ 10-45 ಕ್ಕೆ ಮಂಗಳೂರು ಪತ್ರಿಕಾ ಭವನದ ಪ್ರೆಸ್‌ಕ್ಲಬ್ ಸಭಾಂಗಣದಲ್ಲಿ ನಡೆಯಲಿದೆ.

ಪ್ರಶಸ್ತಿಯು ರೂ.10,001/ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯಕ್ ಇಂದಾಜೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

 

 

 

 

 

 

 

 

 

Recent News

Back To Top