ನವದೆಹಲಿ: ವ್ಯಾಪಮ್ ಹಗರಣದ ಬಗ್ಗೆ ಮೌನವಾಗಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಸಮರ್ಥಿಸುವ ಭರದಲ್ಲಿ ಕಾನೂನು ಸಚಿವ ಸದಾನಂದ ಗೌಡ ತಾವೇ ಸಿಲ್ಲಿ ಕಾಂಟ್ರವರ್ಸಿಗೆ ಒಳಗಾಗಿದ್ದಾರೆ.
ವ್ಯಾಪಮ್ ಹಗರಣಕ್ಕೆ ಸಂಬಂಧಿಸಿದ ಬರೋಬ್ಬರಿ 46 ಜನರು ಸಂಶಯಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದಾರೆ. ಈ ಸಾವುಗಳ ಬಗ್ಗೆ ಮಾಧ್ಯಮಗಳು, ಸರ್ವಾಜನಿಕರು ಗಂಭೀರ ಚರ್ಚೆಗಳನ್ನು ನಡೆಸುತ್ತಿದ್ದಾರೆ. ಆದರೆ ಪ್ರಧಾನಿ ಇದುವರೆಗೆ ಪ್ರತಿಕ್ರಿಯೆ ನೀಡಿಲ್ಲ. ಇದನ್ನೇ ಬಮಡವಾಳ ಮಾಡಿಕೊಂಡಿರುವ ಪ್ರತಿಪಕ್ಷಗಳು ಪ್ರಧಾನಿ ಮೌನ ಮುರಿಯಬೇಕು ಎಂದು ಆಗ್ರಹಿಸುತ್ತಲೇ ಇದೆ.
ಪ್ರತಿಪಕ್ಷಗಳ ಆಗ್ರಹಕ್ಕೆ ಪ್ರತ್ಯುತ್ತರ ನೀಡಲು ಹೋದ ಸದಾನಂದ ಗೌಡರು, ‘ಪ್ರಧಾನಿಯವರು ಸಿಲ್ಲಿ ವಿಚಾರಗಳ ಬಗ್ಗೆ ಮಾತನಾಡುವುದಿಲ್ಲ’ ಎಂದಿದ್ದಾರೆ. ಅವರ ಈ ಹೇಳಿಕೆ ಪ್ರತಿಪಕ್ಷಗಳ ಬಾಯಿಗೆ ಮತ್ತಷ್ಟು ಆಹಾರ ನೀಡಿದೆ.
ವ್ಯಾಪಮ್ ಹಗರಣದಲ್ಲಿ 46 ಮಂದಿ ಸಾವಿಗೀಡಾಗಿದ್ದಾರೆ. ಹೀಗಿದ್ದರೂ ಇದೊಂದು ಸಿಲ್ಲಿ ವಿಚಾರ ಎಂಬಂತೆ ಸದಾನಂದ ಗೌಡರು ಮಾತನಾಡಿದ್ದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.