×
Home About Us Advertise With s Contact Us

ಉಗ್ರರ ದಾಳಿ: ಕೇಂದ್ರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

kharge1ಜಮ್ಮು: ಜಮ್ಮುವಿನ ಕುತ್ವಾ ಪ್ರದೇಶದಲ್ಲಿ ಪೊಲೀಸ್ ಠಾಣೆಯ ಮೇಲೆ ಶುಕ್ರವಾರ ಬೆಳಿಗ್ಗೆ ಉಗ್ರರು ದಾಳಿ ನಡೆಸಿದ ಪ್ರಕರಣವನ್ನು ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.

‘ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರದ ಭದ್ರತೆಯ ಮೇಲೆ ಗಮನ ವಹಿಸುತ್ತಿಲ್ಲ, ಕುತ್ವಾ ಎನ್‌ಕೌಂಟರ್ ಪ್ರಕರಣದಲ್ಲಿ ಗುಪ್ತಚರ ಇಲಾಖೆ ವಿಫಲವಾಗಿದೆ. ಕಣಿವೆ ರಾಜ್ಯದಲ್ಲಿ ಸಾಕಷ್ಟು ಭದ್ರತೆ ನೀಡಿದ್ದೇವೆ ಎಂದು ಪ್ರಧಾನಿ ಹೇಳುತ್ತಾರೆ ಆದರೆ ಉಗ್ರರ ದಾಳಿ ಪದೇ ಪದೇ ಮರುಕಳಿಸುತ್ತಲೇ ಇದೆ. ಇಂದಿನ ಘಟನೆ ಬಗ್ಗೆ ಅಲ್ಲಿನ ಸಿಎಂ ಆಗಲಿ, ಪ್ರಧಾನಿಯಾಗಲಿ ತುಟಿಬಿಚ್ಚಿಲ್ಲ. ಈ ಬಗ್ಗೆ ಸದನದಲ್ಲಿ ಗೃಹಸಚಿವರು ಹೇಳಿಕೆ ಕೊಡಬೇಕು’ ಎಂದು ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದರು.

ಬಳಿಕ ಹೇಳಿಕೆ ನೀಡಿದ ರಾಜನಾಥ್ ಸಿಂಗ್ ‘ಇಬ್ಬರು ಉಗ್ರರನ್ನು ನಮ್ಮ ರಕ್ಷಣಾ ಪಡೆಗಳು ಹತ್ಯೆ ಮಾಡಿವೆ. ಘಟನೆಯಲ್ಲಿ ಇಬ್ಬರು ನಾಗರಿಕರು ಹತರಾದ ಬಗ್ಗೆ ನಮಗೆ ಬೇಸರವಿದೆ. ನಮ್ಮ ಸೇನಾಪಡೆಗಳ ಕಾರ್ಯವನ್ನು ನಾನು ಶ್ಲಾಘಿಸುತ್ತೇನೆ’ ಎಂದರು.

ಇಂದು ಬೆಳಿಗ್ಗೆ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದ್ದ ಪಾಕ್ ಮೂಲದ ಉಗ್ರರು ಇಬ್ಬರು ನಾಗರಿಕರನ್ನು ಹತ್ಯೆ ಮಾಡಿದ್ದರು. ಬಳಿಕ ಕಾರ್ಯಾಚರಣೆ ನಡೆಸಿದ ಸೇನಾಪಡೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ.

Leave a Reply

Your email address will not be published. Required fields are marked *

 

 

 

 

 

 

 

 

 

Recent News

Back To Top