Tuesday, 20th February 2018
×
Home About Us Advertise With s Contact Us

ಗಣಿ ಮತ್ತು ಖನಿಜ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರ

minesನವದೆಹಲಿ: ಖನಿಜಗಳ ಹರಾಜು ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ತರುವ ನಿಟ್ಟಿನಲ್ಲಿ ರಚಿಸಲಾದ ಗಣಿ ಮತ್ತು ಖನಿಜ(ಅಭಿವೃದ್ಧಿ ಮತ್ತು ನಿಯಂತ್ರಣ) ತಿದ್ದುಪಡಿ ಮಸೂದೆ 2015 ಶುಕ್ರವಾರ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದೆ.

ಅಲ್ಲದೇ ಈ ಮಸೂದೆಯನ್ನು ಆಯ್ಕೆ ಸಮಿತಿಗೆ ಮತ್ತೊಮ್ಮೆ ಕೊಂಡೊಯ್ಯುವ ಬಗೆಗಿನ ನಿರ್ಣಯವನ್ನು ರಾಜ್ಯಸಭೆ ತಿರಸ್ಕರಿಸಿತು.

ತೃಣಮೂಲ ಕಾಂಗ್ರೆಸ್, ಎಐಎಡಿಎಂಕೆ, ಬಹುಜನ ಸಮಾಜವಾದಿ ಪಕ್ಷ, ಸಮಾಜವಾದಿ ಪಕ್ಷ, ಬಿಜೆಡಿ ಮಸೂದೆಯ ಪರವಾಗಿ ಮತ ಚಲಾಯಿಸಿದವು. ಕೇವಲ ಕಾಂಗ್ರೆಸ್ ಮತ್ತು ಎಡಪಕ್ಷಗಳು ಮಸೂದೆಯನ್ನು ವಿರೋಧಿಸಿದವು.

ಮಸೂದೆಯನ್ನು ಆಯ್ಕೆ ಸಮಿತಿಗೆ ಕಳುಹಿಸಬೇಕೆಂದು ಕಾಂಗ್ರೆಸ್ ಸದಸ್ಯರು ಪಟ್ಟು ಹಿಡಿದರು. ಆದರೆ ಇದಕ್ಕೆ ಮೇಲ್ಮನೆಯಲ್ಲಿ ಮಾನ್ಯತೆ ಸಿಗಲಿಲ್ಲ.

Leave a Reply

Your email address will not be published. Required fields are marked *

 

 

 

 

 

 

 

 

 

Recent News

Back To Top