ಭುವನೇಶ್ವರ: ಸಾಧನೆಗೆ ಬಡತನ ಎಂದೂ ಅಡ್ಡಿಯಾಗಲಾರದು ಎಂಬುದನ್ನು ಸಾಬೀತುಪಡಿಸಿದ್ದಾಳೆ ಅಪರಾಜಿತಾ ಪ್ರಿಯದರ್ಶಿನಿ ಬೆಹೆರಾ. ಒರಿಸ್ಸಾದ ಹಳ್ಳಿಯೊಂದರ ದಿನಗೂಲಿ ಕಾರ್ಮಿಕನ ಮಗಳಾಗಿರುವ ಅಪರಾಜಿತಾ ಭಾರತೀಯ ಆರ್ಥಿಕ ಸೇವೆ (ಐಇಎಸ್) ಪರೀಕ್ಷೆಯಲ್ಲಿ ರ್ಯಾಂಕ್ ಪಡೆಯುವ ಮೂಲಕ ತನ್ನ ರಾಜ್ಯ, ಹಳ್ಳಿಗೆ ಹೆಮ್ಮೆ ತಂದಿದ್ದಾಳೆ.
ಕೇಂದ್ರಪರದ ಮಹಾನಂಗಳ ಗ್ರಾಮದ ಅಪರಾಜಿತಾ ಅವರು ಯು.ಪಿ.ಎಸ್.ಸಿ.ಯ ಐಇಎಸ್ನಲ್ಲಿ ರಾಷ್ಟ್ರ ಮಟ್ಟದಲ್ಲಿ 13ನೇ ಸ್ಥಾನ ಪಡೆದಿದ್ದಾರೆ. ಇವರು ಮಹಾನಂಗಳ ಗ್ರಾಮದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದು, ಅನಂತರ ಕೇಂದ್ರಾಪುರದ ಮಾರ್ಶಘಾಯ್ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದರು. ಈ ಎರಡೂ ವಿಭಾಗದಲ್ಲಿ ಉತ್ತಮ ಅಂಕ ಪಡೆದಿದ್ದ ಅಪರಾಜಿತಾ ಅನಂತರ ಉತ್ಕಲ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದರು.
ಪೋಷಕರ ಬೆಂಬಲ ನನ್ನ ಯಶಸ್ಸಿಗೆ ಕಾರಣವಾಯಿತು. ಕಲಿಕೆಯಲ್ಲಿ ಎಂದೂ ಶಾರ್ಟ್ಕಟ್ ಮಾರ್ಗ ಬಳಸಲಿಲ್ಲ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.