News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಯುವಕನ ಬಂಧನ: ವಿವರಣೆ ಕೇಳಿದ ಸುಪ್ರೀಂ

supreemನವದೆಹಲಿ: ಸಮಾಜವಾದಿ ಮುಖಂಡ ಅಜಂಖಾನ್ ವಿರುದ್ಧ ಫೇಸ್‌ಬುಕ್‌ನಲ್ಲಿ ಕಾಮೆಂಟ್ ಹಾಕಿದ ಕಾಲೇಜು ವಿದ್ಯಾರ್ಥಿಯನ್ನು ಯಾವ ಆಧಾರದ ಮೇರೆಗೆ ಬಂಧಿಸಲಾಗಿದೆ ಎಂಬ ಬಗ್ಗೆ ವಿವರಣೆ ನೀಡುವಂತೆ ಸುಪ್ರೀಂಕೋರ್ಟ್ ಉತ್ತರಪ್ರದೇಶ ಪೊಲೀಸರಿಗೆ ಸೂಚಿಸಿದೆ.

ಐಜಿ, ಡಿಸಿಪಿನಂತಹ ಉನ್ನತ ಅಧಿಕಾರಿಗಳನ್ನು ಸಂಪರ್ಕಿಸದೆ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66ಎನ್ನು ಹಾಕುವಂತಿಲ್ಲ ಎಂಬ ಸುಪ್ರೀಂಕೋರ್ಟ್ ಸಲಹೆಗೆ ವಿರುದ್ಧವಾಗಿ ವಿದ್ಯಾರ್ಥಿಯ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿ ಬಂದಿರುವ ಪಿಟಿಷನ್‌ಗೆ ಉತ್ತರಿಸುವಂತೆ ಜೆ.ಚೆಲಮೇಶ್ವರ್ ಮತ್ತು ಆರ್.ಎಫ್ ನಾರಿಮನ್ ಅವರನ್ನೊಳಗೊಂಡ ನ್ಯಾಯಪೀಠ ಪೊಲೀಸರಿಗೆ ಆಗ್ರಹಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಸರ್ಕಾರದ ಪರ ವಕೀಲರು ‘ಈ ಪ್ರಕರಣದಲ್ಲಿ ಇನ್ನೇನೂ ಉಳಿದಿಲ್ಲ. ಹುಡುಗನನ್ನು ಈಗಾಗಲೇ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಕಾನೂನಿನಡಿಯಲ್ಲಿ ಆತ ಪರಿಹಾರ ಪಡೆದುಕೊಳ್ಳಬಹುದು’ ಎಂದಿದ್ದಾರೆ.

ಅಜಂಖಾನ್ ವಿರುದ್ಧ ಕಾಮೆಂಟ್ ಹಾಕಿದ್ದಾನೆ ಎಂಬ ಕಾರಣಕ್ಕೆ 11ನೇ ತರಗತಿಯ ವಿದ್ಯಾರ್ಥಿಯನ್ನು ಉತ್ತರಪ್ರದೇಶದಲ್ಲಿ ಬಂಧಿಸಲಾಗಿತ್ತು. ಇದು ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿತ್ತು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top