ವಿಜಯವಾಡ: ಆಂಧ್ರದ ಅಭಿವೃದ್ಧಿಯ ಬಗ್ಗೆ ನೀಡಲಾದ ಎಲ್ಲಾ ಭರವಸೆಗಳನ್ನು ಈಡೇರಿಸುವುದಾಗಿ ಪ್ರಧಾನಿ ನರೇಂದ್ರ ತಿಳಿಸಿದ್ದಾರೆ.
ಗುರುವಾರ ಆಂಧ್ರ ರಾಜಧಾನಿ ಅಮರಾವತಿಗೆ ಶಂಕುಸ್ಥಾಪನೆ ನಡೆಸಿ ಮಾತನಾಡಿದ ಅವರು, ಅಮರಾವತಿ ಜನರ ರಾಜಧಾನಿಯಾಗುವತ್ತ ಸಾಗುತ್ತಿದೆ. ಇದಕ್ಕಾಗಿ ಆಂಧ್ರ ಸರ್ಕಾರವನ್ನು, ಇಲ್ಲಿನ ಜನರನ್ನು ನಾನು ಅಭಿನಂದಿಸುತ್ತೇನೆ ಎಂದರು.
ಆಂಧ್ರದ ಅಭಿವೃದ್ಧಿಯ ಪಯಣದಲ್ಲಿ ಕೇಂದ್ರ ಸದಾ ಜೊತೆಗಿರುವುದಾಗಿ ಭರವಸೆ ನೀಡಿದ ಅವರು, ಜಗತ್ತಿನ ಒಳ್ಳೆಯದನ್ನೆಲ್ಲಾ ಒಟ್ಟುಗೂಡಿಸಿ ರಾಜಧಾನಿಯ ಕೆಲಸ ಆರಂಭಿಸಿದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಕಾರ್ಯ ಶ್ಲಾಘನೀಯ ಎಂದರು.
ತೆಲಂಗಾಣವಾಗಲಿ, ಆಂಧ್ರವಾಗಲಿ ಆತ್ಮ ಒಂದೇ ಅದು ತೆಲುಗು. ಎರಡೂ ರಾಜ್ಯಗಳೂ ಅಭಿವೃದ್ಧಿಯಾಗಬೇಕಿದೆ ಎಂದರು.
ಅಮರಾವತಿ ನಗರಾಭಿವೃದ್ಧಿ ಮಾದರಿಯಾಗಿ ರೂಪುಗೊಳ್ಳಲಿದೆ ಮತ್ತು ಆಂಧ್ರ ಹೊಸ ಆರ್ಥಿಕ ಕ್ರಾಂತಿಯ ನೇತೃತ್ವವನ್ನು ವಹಿಸಲಿದೆ, ಮಾನವ ಕೌಶಲ್ಯದ ಶಕ್ತಿ ಆಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.