×
Home About Us Advertise With s Contact Us

ಕೊನೆಗೂ ಡಿ.ಕೆ.ರವಿ ಸಾವು ಪ್ರಕರಣದ ತನಿಖೆ ಸಿಬಿಐಗೆ

sidduಬೆಂಗಳೂರು: ಒಂದು ವಾರಗಳ ಕಾಲ ನಿರಂತರ ಹೋರಾಟ ನಡೆಸಿದ ರಾಜ್ಯದ ಜನತೆಗೆ ಕೊನೆಗೂ ನ್ಯಾಯ ಸಿಕ್ಕಿದೆ. ಜನರ, ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿ.ಕೆ.ರವಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವುದಾಗಿ ಸೋಮವಾರ ವಿಧಾನಸಭೆಯಲ್ಲಿ ಘೋಷಿಸಿದ್ದಾರೆ.

ಸರ್ಕಾರದ ನಿರ್ಧಾರವನ್ನು ಬಿಜೆಪಿ ಮತ್ತು ಜೆಡಿಎಸ್ ವಿಧಾನಸಭೆಯಲ್ಲಿ ಸ್ವಾಗತಿಸಿವೆ. ಆದರೆ ಪ್ರಕರಣವನ್ನು ಪ್ರತಿಪಕ್ಷಗಳು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

‘’ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂಬುದು 6 ಕೋಟಿ ಕನ್ನಡಿಗರ ಒತ್ತಾಯ. ಕೇವಲ ಪ್ರತಿಪಕ್ಷಗಳ ಒತ್ತಾಯವಲ್ಲ. ಸರ್ಕಾರದ ನಡೆದುಕೊಂಡ ಕ್ರಮಗಳು ಸಂಶಯ ಮೂಡಿಸಿದ್ದವು. ಪ್ರತಿಪಕ್ಷಗಳು ರಾಜಕೀಯ ಮಾಡುತ್ತಿವೆ ಎಂಬುದು ಸತ್ಯಕ್ಕೆ ದೂರವಾದುದು. ಸಿಎಂ ತಮ್ಮ ಸ್ಥಾನದ ಘನತೆಗೆ ತಕ್ಕಂತೆ ಹೇಳಿಕೆ ಕೊಡಬೇಕು’ ಎಂದು ಜೆಡಿಎಸ್ ಮುಖಂಡ ಕುಮಾರಸ್ವಾಮಿ ಹೇಳಿದ್ದಾರೆ.

ಬಿಜೆಪಿ ನಾಯಕರುಗಳೂ ಸಿಎಂ ಹೇಳಿಕೆಯನ್ನು ಖಂಡಿಸಿ ಸದಸನದಲ್ಲಿ ಕೋಲಾಹಲ ಎಬ್ಬಿಸಿವೆ. ಸಿಎಂ ಹೇಳಿಕೆ ಖಂಡಿಸಿ ಜೆಡಿಎಸ್ ಮತ್ತು ಬಿಜೆಪಿ ಸದಸ್ಯರುಗಳು ಸಭಾತ್ಯಾಗ ಮಾಡಿದರು.

 

 

 

 

 

 

 

 

Recent News

Back To Top
error: Content is protected !!