×
Home About Us Advertise With s Contact Us

ಭಾರತ-ಪಾಕ್ ಮಾತುಕತೆಯಲ್ಲಿ 3ನೇ ವ್ಯಕ್ತಿಗೆ ಪ್ರವೇಶವಿಲ್ಲ

akba1ನವದೆಹಲಿ: ಭಾರತ ಮತ್ತು ಪಾಕಿಸ್ಥಾನದ ನಡುವಿನ ಮಾತುಕತೆಯಲ್ಲಿ ಮೂರನೇ ವ್ಯಕ್ತಿಗೆ ಪ್ರವೇಶವಿಲ್ಲ ಎಂದು ಕೇಂದ್ರ ಸೋಮವಾರ ಸ್ಪಷ್ಟಪಡಿಸಿದೆ. ಹುರಿಯತ್ ನಾಯಕರುಗಳು ಪಾಕಿಸ್ಥಾನ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿದ ಹಿನ್ನಲೆಯಲ್ಲಿ ಭಾರತ ಈ ಹೇಳಿಕೆ ನೀಡಿದೆ.

‘ಹುರಿಯತ್ ವಿಷಯದಲ್ಲಿ ಭಾರತದ ನಿಲುವನ್ನು ಈಗಾಗಲೇ ಹಲವು ಬಾರಿ ಸ್ಪಷ್ಟಪಡಿಸಲಾಗಿದೆ. ಈ ಬಗ್ಗೆ ತಪ್ಪಾಗಿ ಅರ್ಥೈಸುವುದು ಮತ್ತು ತಪ್ಪಾಗಿ ವಿಶ್ಲೇಷಿಸುವುದು ಸಮಂಜಸವಲ್ಲ. ಭಾರತ-ಪಾಕಿಸ್ಥಾನ ವಿಷಯದಲ್ಲಿ ಮೂಗುತೂರಿಸುವ ಹಕ್ಕು ಮೂರನೇ ವ್ಯಕ್ತಿಗಿಲ್ಲ ಎಂದು ನಾನು ಖಚಿತಪಡಿಸುತ್ತೇನೆ’ ಎಂದು ವಿದೇಶಾಂಗ ವ್ಯವಹಾರ ವಕ್ತಾರ ಸೈಯದ್ ಅಕ್ಬರುದ್ದೀನ್ ತಿಳಿಸಿದ್ದಾರೆ.

ಸಿಮ್ಲಾ ಒಪ್ಪಂದ ಮತ್ತು ಲಾಹೋರ್ ಘೋಷಣೆಯನ್ವಯ ಶಾಂತಿಯುತವಾಗಿ ಸಮಸ್ಯೆಗಳನ್ನು ಬಗೆಹರಿಸುವುದಷ್ಟೇ ನಮ್ಮ ಮುಂದಿರುವ ಆಯ್ಕೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪ್ರತ್ಯೇಕತಾವಾದಿಗಳು ನಮ್ಮನ್ನು ಭೇಟಿಯಾಗುತ್ತಿರುವುದಕ್ಕೆ ಭಾರತದ ಯಾವುದೇ ಆಕ್ಷೇಪ ಇಲ್ಲ ಎಂದು ಪಾಕ್ ರಾಯಭಾರಿ ಅಬ್ದುಲ್ ಬಸಿತ್ ಹೇಳಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.

Leave a Reply

Your email address will not be published. Required fields are marked *

 

 

 

 

 

 

 

 

 

Recent News

Back To Top