ನವದೆಹಲಿ: ಅನಾದಿ ಕಾಲದಿಂದಲೂ ಮಹಿಳೆಯರ ಪ್ರವೇಶಕ್ಕೆ ನಿಷೇಧವಿರುವ ಶಬರಿಮಲೆ ಈಗ ಚರ್ಚೆಯ ಕೇಂದ್ರ ಬಿಂದುವಾಗಿದೆ. ಮಹಿಳೆಯರ ಪ್ರವೇಶದ ನಿರ್ಬಂಧದ ಬಗ್ಗೆ ಸುಪ್ರೀಂಕೋರ್ಟ್ ಪ್ರಶ್ನಿಸಿರುವುದೇ ಇದಕ್ಕೆ ಕಾರಣ. ಕೇರಳ ಸರ್ಕಾರ ಶಬರಿಮಲೆ ದೇಗುಲ ಮಂಡಳಿಯನ್ನು ಸಮರ್ಥಿಸಿಕೊಂಡರೆ, ಕೆಲವರು ವಿರೋಧಿಸಿದ್ದಾರೆ.
ಕೇಂದ್ರ ಸಂಸ್ಕೃತಿ ಸಚಿವ ಮಹೇಶ್ ಶರ್ಮಾ ಅವರು ಶಬರಿಮಲೆಗೆ ಮಹಿಳೆಯರಿಗೆ ಪ್ರವೇಶಕ್ಕೆ ಅನುಮತಿ ನೀಡಬೇಕೆಂದು ಹೇಳಿದ್ದಾರೆ. ಅಲ್ಲದೇ ಜಾತಿ ಅಥವಾ ಲಿಂಗದ ಆಧಾರದಲ್ಲಿ ಯಾವುದೇ ತಾರತಮ್ಯ ನಡೆಸಬಾರದು ಎಂದು ದೇಗುಲ ಮಂಡಳಿಗೆ ಸಲಹೆ ನೀಡಿದ್ದಾರೆ.
‘ಯಾವುದೇ ಧಾರ್ಮಿಕ ಸ್ಥಳದಲ್ಲಿ ಲಿಂಗ ತಾರತಮ್ಯಕ್ಕೆ ಅನುವು ಮಾಡಿಕೊಡುವುದನ್ನು ಸರ್ಕಾರ ಸಹಿಸೋದಿಲ್ಲ’ ಎಂದು ಅವರು ಹೇಳಿದ್ದಾರೆ.
ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್ ಮಹಿಳಾ ಪ್ರವೇಶ ನಿರ್ಬಂಧವನ್ನು ಸಮರ್ಥಿಸಿದ್ದು, ದೇಗುಲದ ಅನಾದಿ ಕಾಲದ ಸಂಪ್ರದಾಯದಲ್ಲಿ ಸುಪ್ರೀಂ ಮಧ್ಯಪ್ರವೇಶ ಮಾಡುವುದು ಸರಿಯಲ್ಲ ಎಂದಿದ್ದಾರೆ.
ಒಟ್ಟಿನಲ್ಲಿ ಶನಿ ಶಿಂಗನಾಪುರ ಮತ್ತು ಶಬರಿಮಲೆಯಲ್ಲಿ ಮಹಿಳಾ ಪ್ರವೇಶ ನಿರ್ಬಂಧ ಸಂಪ್ರದಾಯ ಇದೀಗ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.