ಮಂಗಳೂರು : ಪತ್ರಕರ್ತನ ಮೇಲೆ ನಡೆದ ಹಲ್ಲೆ ಪ್ರಕರಣದ ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ದ.ಕ. ಜಿಲ್ಲಾ ಪತ್ರಕರ್ತರ ಸಂಘವು ಜಿಲ್ಲಾಧಿಕಾರಿಯವರಿಗೆ ಮನವಿ ಮಾಡಲಾಯಿತು.
ಇದಕ್ಕೆ ಪ್ರತಿಕ್ರಿಯಿಸಿದ ಅವರು, ಪತ್ರಕರ್ತರ ಸುರಕ್ಷಾ ವ್ಯವಸ್ಥೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚನೆ ನೀಡುತ್ತೇನೆ ಎಂದು ದ.ಕ. ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಪತ್ರಕರ್ತರಿಗೆ ಭರವಸೆ ನೀಡಿದರು.
ಮಾಧ್ಯಮದವರು ಭಯಮುಕ್ತ ವಾತಾವರಣದಲ್ಲಿ ಕರ್ತವ್ಯ ನಿರ್ವಹಣೆಗೆ ಅವಕಾಶ ಮಾಡಿಕೊಡಬೇಕು ಎಂದು ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಜಿಲ್ಲಾಧಿಕಾರಿಯವರಲ್ಲಿ ವಿನಂತಿಸಿದರು.
ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿದ ನಿಯೋಗದಲ್ಲಿ ಸಂಘದ ಉಪಾಧ್ಯಕ್ಷ ಸುಖೇಶ್ ಶೆಟ್ಟಿ, ಕಾರ್ಯದರ್ಶಿ ಶ್ರೀನಿವಾಸ ಇಂದಾಜೆ, ಪಿ.ಬಿ. ಹರೀಶ್ ರೈ, ಮುಹಮ್ಮದ್ ಆರೀಫ್, ಪುಷ್ಪರಾಜ್ ಬಿ.ಎನ್, ಜಿತೇಂದ್ರ ಕುಂದೇಶ್ವರ, ತಾರಾನಾಥ ಕಾಪಿಕ್ಕಾಡ್, ಪ್ರಕಾಶ್ ಪಾಂಡೇಶ್ವರ, ಇಬ್ರಾಹಿಂ ಅಡ್ಕಸ್ಥಳ ಮತ್ತಿತರರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.