ವಾಷಿಂಗ್ಟನ್: ನ್ಯೂಕ್ಲಿಯರ್ ಟೆರರಿಸಂನ ಬೆದರಿಕೆಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಷಿಂಗ್ಟನ್ನಲ್ಲಿ ನಡೆದ ನ್ಯೂಕ್ಲಿಯರ್ ಸೆಕ್ಯೂರಿಟಿ ಸಮಿತ್ನ ಸಮಾರೋಪದ ಸಂದರ್ಭ ಪ್ರತಿಪಾದಿಸಿದ್ದಾರೆ.
ತಂತ್ರಜ್ಞಾನದ ಮೂಲಕ ಮಾತ್ರ ನಾವು ಭಯೋತ್ಪಾದನೆಯನ್ನು ಸಮರ್ಥವಾಗಿ ಎದುರಿಸಲು, ಉಗ್ರರಿಗೆ ಸಮರ್ಥ ಉತ್ತರವನ್ನು ನೀಡಲು ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇದೇ ವೇಳೆ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಅವರು, ಹೆಚ್ಚುತ್ತಿರುವ ಇಸಿಸ್ ಉಗ್ರರ ಹೆಚ್ಚುತ್ತಿರುವ ಬೆದರಿಕೆಯನ್ನು ಹತ್ತಿಕ್ಕಲು ವಿಶ್ವ ನಾಯಕರು ಒಗ್ಗಟ್ಟಾಗಬೇಕು ಎಂದು ಕರೆ ನೀಡಿದರು.
ಎರಡು ದಿನಗಳ ಕಾಲ ನಡೆದ ನ್ಯೂಕ್ಲಿಯರ್ ಸೆಕ್ಯೂರಿಟಿ ಸಮಿತ್ ಶುಕ್ರವಾರ ರಾತ್ರಿ ಅಂತ್ಯಗೊಂಡಿದೆ. ಇದರಲ್ಲಿ 50 ದೇಶಗಳ ನಾಯಕರು ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.