ಕೀವ್: ಉಕ್ರೇನ್ನಲ್ಲಿ ಮೂವರು ಭಾರತೀಯ ವಿದ್ಯಾರ್ಥಿಗಳ ಮೇಲೆ ತೀವ್ರ ತರನಾದ ಹಲ್ಲೆಗಳು ನಡೆದಿದ್ದು, ಅದರಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.
ಅಲ್ಲಿನ ಮೆಡಿಕಲ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಮೃತ ವಿದ್ಯಾರ್ಥಿಗಳನ್ನು ಪ್ರಣವ್ ಶೈನ್ದಿಲ್ಯಾ, ಅಂಕುರ್ ಸಿಂಗ್ ಎಂದು ಗುರುತಿಸಲಾಗಿದೆ. ಇಂದ್ರಜಿತ್ ಚೌವ್ಹಾಣ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಪ್ರಿಲ್ 10 ರಂದು ಈ ಘಟನೆ ನಡೆದಿದೆ.
ಈ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು, ಕಿವಿಯಲ್ಲಿರುವ ನಮ್ಮ ರಾಯಭಾರ ಕಛೇರಿ ಅಧಿಕಾರಿಗಳು ಈ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಪೊಲೀಸರ, ಯೂನಿವರ್ಸಿಟಿಯ ಮತ್ತು ಸ್ಥಳೀಯರ ಸಂಪರ್ಕದಲ್ಲಿದ್ದೇವೆ ಎಂದಿದ್ದಾರೆ.
ಉಕ್ರೇನ್ ಪ್ರಜೆಗಳಿಂದ ಇವರು ದಾಳಿಗೊಳಗಾಗಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.