ನವದೆಹಲಿ: ಪಾಕಿಸ್ಥಾನ ಆಕ್ರಮಿತ ಕಾಶ್ಮೀರದಲ್ಲಿ ಅರಾಜಕತೆ ಉದ್ಭವವಾಗಿದೆ, ಅಲ್ಲಿನ ಜನರು ಬೀದಿಗಿಳಿದು ಪಾಕಿಸ್ಥಾನದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಇವರ ಮೇಲೆ ಅಲ್ಲಿನ ಸರ್ಕಾರ ತೀವ್ರವಾಗಿ ದೌರ್ಜನ್ಯ ಎಸಗುತ್ತಿದೆ.
ಅಲ್ಲಿನ ಈ ಪರಿಸ್ಥಿತಿಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹಖಾತೆಯ ರಾಜ್ಯ ಸಚಿವ ಕಿರಣ್ ರಿಜ್ಜು ಅವರು, ಪಾಕ್ ಆಕ್ರಮಿತ ಕಾಶ್ಮೀರದ ಸ್ಥಿತಿ ಚಿಂತನಾಮಯವಾಗಿದೆ, ಅಲ್ಲಿನ ಮಾನವ ಹಕ್ಕಿಗೆ ಪಾಕಿಸ್ಥಾನ ಪ್ರಾಮುಖ್ಯತೆಯನ್ನೇ ನೀಡಿಲ್ಲ ಎಂದಿದ್ದಾರೆ.
ಅಲ್ಲಿ ಇದೇ ಮೊದಲು ಮಾನವ ಹಕ್ಕು ಉಲ್ಲಂಘನೆಯಾಗುತ್ತಿಲ್ಲ, ಪಾಕ್ ಪಡೆ ಮತ್ತು ಭದ್ರತಾ ಸಿಬ್ಬಂದಿಗಳಿಂದ ಅಲ್ಲಿನ ಜನರ ಮೇಲೆ ನಿರಂತರ ದೌರ್ಜನ್ಯವಾಗುತ್ತಿದೆ ಎಂದಿದ್ದಾರೆ.
‘ಈ ಬಗ್ಗೆ ನಾವು ಧ್ವನಿ ಎತ್ತಿದ್ದೇವೆ, ವಿಶ್ವ ಸಮುದಾಯ ಕೂಡ ಇತ್ತ ನೋಡಬೇಕಿದೆ, ಅಂತಾರಾಷ್ಟ್ರೀಯ ಮಾನವ ಹಕ್ಕು ಆಯೋಗ ಕೂಡ ಇದರತ್ತ ಗಮನ ಕೊಡಬೇಕು’ ಎಂದು ರಿಜ್ಜು ಒತ್ತಾಯಿಸಿದ್ದಾರೆ.
ಪಾಕ್ ಆಕ್ರಮಿತ ಭಾಗದಲ್ಲಿ ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ, ಅಲ್ಲಿ ಉದ್ಯೋಗಗಳನ್ನು ಇತರ ಪಾಕಿಸ್ಥಾನಿಯರಿಗೆ ನೀಡಲಾಗುತ್ತಿದೆ, ಕಾಶ್ಮೀರಿಗರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ ಹಲವು ಸಂಘಟನೆಗಳು ಪ್ರತಿಭಟನೆಯನ್ನು ನಡೆಸುತ್ತಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.