ನವದೆಹಲಿ : ಮೇ 1 ರಂದು ಎಐಪಿಎಂಟಿ ಪರೀಕ್ಷೆ ನಡೆಯಲಿದ್ದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು ವಿದ್ಯಾರ್ಥಿಗಳಿಗೆ ವಸ್ತ್ರಸಂಹಿತೆಯನ್ನು ವಿಧಿಸಲು ನಿರ್ಧರಿಸಿದೆ.
ಕಳೆದ ವರ್ಷ ಪರೀಕ್ಷೆಯ ವೇಳೆ ಅಕ್ರಮ ನಡೆದಿದ್ದು, ಪರೀಕ್ಷೆ ರದ್ದಾಗಿ ಮರು ಪರೀಕ್ಷೆ ನಡೆಸುವಂತೆ ಕೋರ್ಟ್ ಆದೇಶ ನೀಡಿತ್ತು. ಈ ವರ್ಷ ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು ವಿದ್ಯಾರ್ಥಿಗಳಿಗೆ ವಸ್ತ್ರ ಸಂಹಿತೆಯನ್ನು ಜಾರಿಗೆ ತರಲು ನಿರ್ಧರಿಸಿದೆ.
ವಿದ್ಯಾರ್ಥಿಗಳು ಕಡು ಬಣ್ಣದ ಬಟ್ಟೆಯನ್ನು ಧರಿಸಬಾರದು. ಅರ್ಧ ತೋಳಿನ ಬಟ್ಟೆಗಳನ್ನು ಧರಿಸಬೇಕು. ಡ್ರೆಸ್ಗಳಲ್ಲಿ ದೊಡ್ಡ ಬಟನ್, ಫ್ಯಾನ್ಸಿ ಪೆಂಡೆಂಟ್ಗಳಿರಬಾರದು. ಶೂ ಧರಿಸಬಾರದು. ಸ್ಲಿಪರ್ ಅಥವಾ ಸ್ಯಾಂಡಲ್ ಧರಿಸಬಹುದು.
ಬ್ಯಾಗ್, ಬೆಲ್ಟ್, ಕ್ಯಾಪ್, ಹೇರ್ ಬ್ಯಾಂಡ್ಗಳನ್ನು ಪರೀಕ್ಷಾ ಕೊಠಡಿಗೆ ತೆಗೆದುಕೊಂಡು ಹೋಗುವ ಹಾಗಿಲ್ಲ.
ಧಾರ್ಮಿಕ ಸಂಪ್ರದಾಯಿಕ ಬಟ್ಟೆಗಳನ್ನು ಧರಿಸಲು ಅವಕಾಶ ನೀಡಲಾಗಿದ್ದು, ಅದನ್ನು ಧರಿಸುವವರು ೮.೩೦ರೊಳಗೆ ಪರೀಕ್ಷಾ ಕೇಂದ್ರಕ್ಕೆ ಬಂದು ತಲುಪಬೇಕೆಂದು ಆದೇಶಿಸಲಾಗಿದೆ.
ದೇಶಾದ್ಯಂತ ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ಎಂಬಿಬಿಎಸ್, ಬಿಡಿಎಸ್ ಮತ್ತು ಸ್ನಾತಕೋತ್ತರ (ಪಿಜಿ) ಕೋರ್ಸ್ಗಳಿಗೆ ಎನ್ಇಇಟಿ ಮೂಲಕ 2 ಹಂತಗಳಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದೆ. ಮೊದಲ ಹಂತ ಮೇ 1 ರ ಭಾನುವಾರದಂದು ನಡೆಯಲಿದೆ. 2 ನೇ ಹಂತದ ಪರೀಕ್ಷೆ ಜುಲೈ 24 ರಂದು ನಡೆಯಲಿದೆ. ಅಂತಿಮ ಫಲಿತಾಂಶ ಆಗಸ್ಟ್ 17 ರ ಒಳಗೆ ಪ್ರಕಟಿಸಲಾಗುವುದು ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.