ನವದೆಹಲಿ: ಸ್ವಾತಂತ್ರ್ಯ ಸೇನಾನಿ ಸುಭಾಷ್ ಚಂದ್ರ ಬೋಸ್ ಅವರು ವಿಮಾನ ಅಪಘಾತದಲ್ಲಿ ಮೃತರಾದರು ಎಂದು ಎರಡು ಸಮಿತಿಗಳು ನೀಡಿದ ವರದಿಯನ್ನು ಸ್ವೀಕರಿಸಲು ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರು ನಿರಾಕರಿಸಿದ್ದರು ಎಂಬ ಮಾಹಿತಿ ಶುಕ್ರವಾರ ಬಿಡುಗಡೆಯಾದ 25 ದಾಖಲೆಗಳಿಂದ ತಿಳಿದು ಬಂದಿದೆ.
ಅಲ್ಲದೇ ಅವರು ನೇತಾಜೀ ನಿಗೂಢ ಸಾವಿನ ಬಗೆಗಿನ ತನಿಖೆಯನ್ನು ರಿ-ಓಪನ್ ಮಾಡಿಸಿದರು, ತಜ್ಞರ ತನಿಖೆಯಿಂದ ಮಾತ್ರ ಸತ್ಯಾಂಶ ಹೊರ ಬೀಳಲಿದೆ ಎಂಬುದನ್ನು ಅವರು ನಂಬಿದ್ದರು ಎಂದು ದಾಖಲೆಗಳು ತಿಳಿಸಿವೆ.
ಶುಕ್ರವಾರ ಮೂರನೇ ಹಂತವಾಗಿ ನೇತಾಜೀ ಅವರಿಗೆ ಸಂಬಂಧಪಟ್ಟ ರಹಸ್ಯ ದಾಖಲೆಗಳನ್ನು ಕೇಂದ್ರ ಸಂಸ್ಕೃತಿ ಸಚಿವ ಮಹೇಶ್ ಶರ್ಮಾ ಅವರು ಬಿಡುಗಡೆ ಮಾಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.