ನವದೆಹಲಿ: 2012-14ರಲ್ಲಿ ದೇಶದಲ್ಲಿ ಸುಮಾರು 25 ಸಾವಿರ ಮಹಿಳೆಯರು ವರದಕ್ಷಿಣೆ ಸಂಬಂಧಿತ ದೌರ್ಜನ್ಯಗಳಿಂದ ಕೊಲೆಗೀಡಾಗಿದ್ದಾರೆ ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮೇನಕಾ ಗಾಂಧಿ ಅವರು ಲೋಕಸಭೆಗೆ ತಿಳಿಸಿದ್ದಾರೆ.
ಈ ವರ್ಷದಲ್ಲಿ ಒಟ್ಟು 30 ಸಾವಿರ ವರದಕ್ಷಿಣೆ ಪ್ರಕರಣಗಳು ದಾಖಲಾಗಿವೆ ಎಂದು ಅವರು ಲಿಖಿತ ಮಾಹಿತಿಯನ್ನು ನೀಡಿದ್ದಾರೆ.
ನ್ಯಾಷನಲ್ ಕ್ರೈಮ್ ರಿಕಾರ್ಡ್ ಬ್ಯುರೋದ ವರದಿಯ ಪ್ರಕಾರ 2012, 2013, 2014ರ ಸಾಲಿನಲ್ಲಿ ಕ್ರಮವಾಗಿ 8,233, 8,083ಮತ್ತು 8,455ಪ್ರಕರಣಗಳು ದಾಖಲಾಗಿವೆ ಎಂದು ಸಚಿವಾಲಯ ತಿಳಿಸಿದೆ.
ಇದೇ ಸಾಲಿನಲ್ಲಿ ವರದಕ್ಷಿಣೆ ತಡೆ ಕಾಯ್ದೆಯ ಅನ್ವಯ 9038, 10709, 10,050 ಪ್ರಕರಣಗಳು ದಾಖಲಾಗಿವೆ.
ಮಹಿಳೆಯರಿಗೆ ಸಂಬಂಧಿಸಿದ ವಿವಿಧ ಕಾನೂನುಗಳ ಬಗ್ಗೆ ನಾವು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ ನಿರಂತರ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ಮೇನಕಾ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.