×
Home About Us Advertise With s Contact Us

ಮಾ.27ರಂದು ವಾಜಪೇಯಿಗೆ ‘ಭಾರತ ರತ್ನ’ ಪ್ರದಾನ

vajpayeeನವದೆಹಲಿ: ಮಾ.27ರಂದು ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ‘ಭಾರತ ರತ್ನ’ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.

ವಾಜಪೇಯಿ ಅನಾರೋಗ್ಯ ಪೀಡಿತರಾಗಿರುವುದರಿಂದ ಅವರ ನಿವಾಸಕ್ಕೆ ತೆರಳಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಮುಖಂಡರು ಹಾಜರರಿರುವ ಸಾಧ್ಯತೆ ಇದೆ.

ಮಾ.31ರಂದು ಸ್ವತಂತ್ರ ಹೋರಾಟಗಾರ ಮದನ್ ಮೋಹನ್ ಮಾಳವಿಯಾ ಅವರಿಗೆ ಮರಣೋತ್ತರ ಭಾರತ ರತ್ನ ಪ್ರದಾನ ಮಾಡಲಾಗುತ್ತದೆ. ರಾಷ್ಟ್ರಪತಿ ಭವನದಲ್ಲಿ ಅವರ ಕುಟುಂಬ ಸದಸ್ಯರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

 

Leave a Reply

Your email address will not be published. Required fields are marked *

 

 

 

 

 

 

 

 

 

Recent News

Back To Top