ನವದೆಹಲಿ : 2016 ರ ಕಬಡ್ಡಿ ವಿಶ್ವಕಪ್ ಅಕ್ಟೋಬರ್ ತಿಂಗಳಲ್ಲಿ ಭಾರತದಲ್ಲಿ ಆಯೋಜನೆಗೊಳ್ಳಲಿದೆ. ಈ ಬಗ್ಗೆ ಅಂತಾರಾಷ್ಟ್ರೀಯ ಕಬಡ್ಡಿ ಫೆಡರೇಷನ್ ಭಾನುವಾರ ಅಧಿಕೃತ ಘೋಷಣೆ ಮಾಡಿದೆ.
ವಿಶ್ವಕಪ್ನ ಆತಿಥ್ಯ ವಹಿಸಿರುವ ಭಾರತ ಸೇರಿದಂತೆ ಯುಎಸ್ಎ, ಕೆನಡಾ, ಯುಕೆ, ಆಸ್ಟ್ರೇಲಿಯಾ, ಇರಾನ್, ಪೋಲಾಂಡ್, ಪಾಕಿಸ್ಥಾನ, ಬಾಂಗ್ಲಾದೇಶ, ಕೊರಿಯಾ, ಜಪಾನ್, ಕೀನ್ಯಾ ದೇಶಗಳು ಇದರಲ್ಲಿ ಪಾಲ್ಗೊಳ್ಳಲಿವೆ.
1990 ರಲ್ಲಿ ಕಬಡ್ಡಿ ಏಷ್ಯನ್ ಗೇಮ್ಸ್ನ ಭಾಗವಾಯಿತು. ಅಲ್ಲಿಂದ ಇಲ್ಲಿಯವರೆಗೂ ಭಾರತ ಚಿನ್ನದ ಪದಕವನ್ನು ಗೆದ್ದುಕೊಳ್ಳುತ್ತಿದೆ.
‘2016 ರ ವಿಶ್ವಕಪ್ನ್ನು ಭಾರತ ಆಯೋಜನೆ ಮಾಡಲಿದ್ದು, ಜಾಗತಿಕ ಮಟ್ಟದಲ್ಲಿ ಈ ಕ್ರೀಡೆಯನ್ನು ಬೆಳೆಸಲು ನಾವು ಬದ್ಧರಾಗಿದ್ದೇವೆ’ ಎಂದು ಇಂಡಿಯಾ ಕಬಡ್ಡಿ ಫೆಡರೇಷನ್ನ ಅಧ್ಯಕ್ಷ ಜನಾರ್ಧನ್ ಸಿಂಗ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.