ನವದೆಹಲಿ: ಭಾರತ-ಚೀನಾ ಗಡಿಯಲ್ಲಿ ಚೀನೀ ಸೈನಿಕರ ಗಡಿ ಉಲ್ಲಂಘನೆ, ಇತರ ಚಟುವಟಿಕೆಗಳು ಹೆಚ್ಚುತ್ತಿದ್ದು, ಇದನ್ನು ನಿಯಂತ್ರಿಸಲು ಬ್ರಹ್ಮೋಸ್ ಕ್ಷಿಪಣಿಗಳ ನಿಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಬ್ರಹ್ಮೋಸ್ನ 100 ಕ್ಷಿಪನಿಗಳ ಒಂದು ರೆಜಿಮೆಂಟ್ನ್ನು ಸೇನೆಗೆ ಸೇರ್ಪಡೆ ಮಾಡಲಿದೆ.
ಚೀನಾ ಗಡಿಯಲ್ಲಿ ಸೇನೆ 4300 ಕೋಟಿ ರೂ. ವೆಚ್ಚದಲ್ಲಿ ಬ್ರಹ್ಮೋಸ್ ಕ್ಷಿಪಣಿಯ ಒಂದು ರೆಜಿಮೆಂಟ್ನ್ನು ಸೇರ್ಪಡೆ ಮಾಡಲಿದ್ದು ಇದು 100 ಕ್ಷಿಪಣಿಗಳು, 5 ಕ್ಷಿಪಣಿ ಉಡಾವಣಾ ಟ್ರಕ್ಗಳು, ಮೊಬೈಲ್ ಕಮಾಂಡ್, ಇತರ ಉಪಕರಣಗಳನ್ನು ಹೊಂದಲಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.