ಗುವಾಹಟಿ: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ವಿರುದ್ಧದ ಹೇಳಿಕೆ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಲಾಗಿದ್ದು, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಅಸ್ಸಾಂನ ಮೆಟ್ರೋಪೊಲಿಟನ್ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.
ಸೆಪ್ಟೆಂಬರ್ 29ರಂದು ಕೋರ್ಟ್ಗೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಅದು ಸೂಚಿಸಿದೆ.
ಆರ್ಎಸ್ಎಸ್ ಸಂಘಟನೆಯನ್ನು ಕಳಂಕ ಎಂದು ಆರೋಪಿಸಿದ್ದಕ್ಕೆ ಗಾಂಧಿ ವಿರುದ್ಧ ಆರ್ಎಸ್ಎಸ್ ಕಾರ್ಯಕರ್ತ ಅಂಜನ್ ಬೋರಾ ಅವರು ಅಸ್ಸಾಂನ ಕಾಮ್ರುಪ್ ಕೋರ್ಟ್ನ ಮ್ಯಾಜಿಸ್ಟ್ರೇಟ್ ಎದುರು ಕ್ರಿಮಿನಲ್ ಮೊಕದ್ದಮೆ ದೂರು ಸಲ್ಲಿಸಿದ್ದರು.
ಡಿಸೆಂಬರ್ 12, 2015ರಂದು ಅಸ್ಸಾಂನ ಬಾರ್ಪೇಟಾ ಸತ್ರದ 16ನೇ ಶತಮಾನದ ವೈಷ್ಣವ ದೇವಾಲಯಕ್ಕೆ ಆರ್ಎಸ್ಎಸ್ ಕಾರ್ಯಕರ್ತರು ಪ್ರವೇಶ ನೀಡಲಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿ ಸಂಸ್ಥೆಯ ಘನತೆಗೆ ಧಕ್ಕೆ ಉಂಟುಮಾಡಿದ್ದರು ಎಂದು ಅವರು ತಮ್ಮ ದೂರಿನಲ್ಲಿ ಹೇಳಿದ್ದರು.
ಡಿ.12ರಂದು ಬಾರ್ಪೇಟಾ ಸತ್ರಕ್ಕೆ ಆಗಮಿಸಬೇಕಿದ್ದ ಗಾಂಧಿ ನೇರವಾಗಿ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ಆದರೆ ಎರಡು ದಿನದ ಬಳಿಕ ಡಿ.14ರಂದು ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೆಲವು ನಾಯಕರು ಹಾಗೂ ಆರ್ಎಸ್ಎಸ್ ಕಾರ್ಯಕರ್ತರು ಪ್ರವೇಶ ನೀಡಲಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿರುವ ಬಗ್ಗೆ ಬೋರಾ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.