ನವದೆಹಲಿ: ಭಾರತದ ಪುರಾತತ್ವ ಇಲಾಖೆ (ಎಎಸ್ಐ) ಸೇರಿದಂತೆ ಸಂಸ್ಕೃತಿ ಸಚಿವಾಲಯದ ಅಡಿಯಲ್ಲಿರುವ 45 ಸಂಸ್ಥೆಗಳ 5000 ಹುದ್ದೆಗಳು ಖಾಲಿ ಇದ್ದು, ಇದರಿಂದ ಭದ್ರತೆ, ಸಂರಕ್ಷಣೆ ಮತ್ತು ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆಗೆ ತೊಂದರೆ ಎದುರಾಗಿದೆ ಎಂದು ಸಂಸ್ಕೃತಿ ಸಚಿವ ಮಹೇಶ್ ಶರ್ಮಾ ಹೇಳಿದ್ದಾರೆ.
ಸಂಸ್ಕೃತಿ ಸಚಿವಾಲಯದ 45 ಸಂಸ್ಥೆಗಳಲ್ಲಿ ಮಂಜೂರು ಮಾಡಲಾದ 15,602 ಹುದ್ದೆಗಳಲ್ಲಿ 10,284 ಹುದ್ದೆಗಳು ಭರ್ತಿಯಾಗಿವೆ. ಉಳಿದ ಹುದ್ದೆಗಳು ಹಲವು ವರ್ಷಗಳಿಂದ ಖಾಲಿ ಉಳಿದಿವೆ. ಈ ಹುದ್ದೆಗಳ ಭರ್ತಿಗೆ ಕಾಂಟ್ರಾಕ್ಟ್ ಆಧಾರದಲ್ಲಿ ಜನರನ್ನು ನೇಮಕ ಮಾಡಲಾಗಿದೆ ಎಂದು ಶರ್ಮಾ ಅವರು ಲೋಕಸಭೆಗೆ ತಿಳಿಸಿದ್ದಾರೆ.
ದೇಶದಲ್ಲಿ ಸುಮಾರು 80,000 ಸ್ಮಾರಕಗಳಿದ್ದು, 3,686 ಸ್ಮಾರಕಗಳು ಎಎಸ್ಐಯಿಂದ ರಕ್ಷಿಸಲ್ಪಟ್ಟಿವೆ. ಆದಾಗ್ಯೂ ರಾಷ್ಟ್ರೀಯ ಪ್ರಾಮುಖ್ಯತೆಯ ಯಾವುದೇ ಸ್ಮಾರಕಗಳನ್ನು ನಿರ್ಲಕ್ಷ್ಯ ಮಾಡಲಾಗಿಲ್ಲ ಅಥವಾ ಮಾನವಶಕ್ತಿಯ ಅಗತ್ಯಕ್ಕಾಗಿ ಕೆಡವಿಲ್ಲ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.