ನವದೆಹಲಿ: ಸ್ವಾತಂತ್ರ್ಯೋತ್ಸವ ವಾರದಲ್ಲಿ ರಾಷ್ಟ್ರೀಯ ಸ್ಮಾರಕಗಳಲ್ಲಿ ಸೆಲ್ಫಿಗಳನ್ನು ಕ್ಲಿಕ್ಕಿಸುವುದಕ್ಕೆ ಪ್ರವಾಸೋದ್ಯಮ ಸಚಿವಾಲಯ ನಿರ್ಬಂಧ ಹೇರಿದೆ.
ಆಗಸ್ಟ್ 12-18ರ ವರೆಗೆ ದೇಶದ ಎಲ್ಲ ಪ್ರಮುಖ ಸ್ಮಾರಕಗಳ ಮುಂದೆ ಪ್ರವಾಸಿಗರು ಸೆಲ್ಫೀ ತೆಗೆಯದಂತೆ ನಿರ್ಬಂಧ ಹೇರಲು ಪ್ರವಾಸೋದ್ಯಮ ಸಚಿವಾಲಯ ರಾಜ್ಯಗಳಿಗೆ ಸೂಚನೆ ನೀಡಿದೆ. ಸ್ವಾತಂತ್ರ್ಯೋತ್ಸವ ಹಾಗೂ ‘ಭಾರತ ಪರ್ವ’ ಕಾರ್ಯಕ್ರಮದ ಸಂದರ್ಭ ಭದ್ರತಾ ಕ್ರಮದ ಭಾಗವಾಗಿ ಈ ಸೂಚನೆ ನೀಡಲಾಗಿದೆ.
ಸ್ವಾತಂತ್ರ್ಯೋತ್ಸವದ ಸಂದರ್ಭ ಭಯೋತ್ಪಾದಕರು ದಾಳಿ ನಡೆಸಬಹುದು ಎಂದು ನಂಬಲಾಗಿದ್ದು, ಕೆಲವು ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರುವಂತೆ ಪ್ರವಾಸೋದ್ಯಮ ಹಾಗೂ ಭಾರತೀಯ ಪುರಾತತ್ವ ಇಲಾಖೆಗೆ ಹೇಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.