ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯಕ್ಕೆ ಕ್ಯಾಪ್ಟನ್ ಕಾರ್ಣಿಕ್ ಖಂಡನೆ

Published on : August 19, 2016,
By :
Share on FacebookTweet about this on TwitterShare on Google+

Karnikಮಂಗಳೂರು : ಬೆಂಗಳೂರಿನ ಅಮ್ನೆಷ್ಟಿ ಇಂಟರ್ನ್ಯಾಷನಲ್ ಸಂಸ್ಥೆಯ ಕಾರ್ಯಕ್ರಮದಲ್ಲಿ ದೇಶ ವಿರೋಧಿ ಹಾಗೂ ಭಾರತೀಯ ಸೇನೆಯ ವಿರುದ್ಧ ಘೋಷಣೆಯನ್ನು ಕೂಗಿದವರನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ಎಬಿವಿಪಿ ಕಾರ್ಯಕರ್ತರ ಮೇಲೆ ವಿನಾಕಾರಣ ಲಾಠಿಚಾರ್ಚ್ ನಡೆಸಿ ದೌರ್ಜನ್ಯ ನಡೆಸಿರುವುದನ್ನು ಅತ್ಯಂತ ಕಟು ಶಬ್ದಗಳಲ್ಲಿ ಖಂಡಿಸುತ್ತೇನೆ. ಸರ್ಕಾರ ದೇಶ ದ್ರೋಹಿಗಳ ವಿರುದ್ಧ ಕ್ರಮ ಜರುಗಿಸದೆ, ದೇಶಭಕ್ತ ವಿದ್ಯಾರ್ಥಿ ಸಂಘಟನೆಯನ್ನು ಹತ್ತಿಕ್ಕ  ಹೊರಟಿರುವುದು ದುರಾದೃಷ್ಟಕರ. ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ನಡೆಸಿದ ಪೊಲೀಸ್ ರ ವಿರುದ್ಧ ಕ್ರಮ ಜರುಗಿಸುವಂತೆ ಹಾಗೂ ದೇಶವಿರೋಧಿ ಘೋಷಣೆ ಕೂಗಿದ ದ್ರೋಹಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸುತ್ತೇನೆ ಎಂದು ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Leave a Reply