ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರ ಹಾಗೂ ಗಲಭೆಯ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಜೊತೆ ಮತುಕತೆ ನಡೆಸಿದ ಗೃಹ ಸಚಿವ ರಾಜ್ನಾಥ್ ಸಿಂಗ್, ಹಿಂಸಾಚಾರ ನಿಯಂತ್ರಣಕ್ಕಾಗಿ ಭಾರತೀಯ ಸೇನೆ ಬಳಸಿದ ಪೆಲ್ಲೆಟ್ ಗನ್ಗೆ ಪರ್ಯಾಯ ವ್ಯವಸ್ಥೆ ತರಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಿದ್ದಾರೆ.
ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಬುರ್ಹಾನ್ ವಾನಿ ಹತ್ಯೆಯ ಬಳಿಕ ಕಾಶ್ಮೀರದಲ್ಲಿ ಕರ್ಫ್ಯೂ, ಹಿಂಸಾಚಾರ ನಡೆಯುತ್ತಿದ್ದು, ನೂರಾರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. 4000 ಭದ್ರತಾ ಪಡೆಗಳೂ ಗಾಯಗೊಂಡಿದ್ದಾರೆ. ಪೆಲ್ಲೆಟ್ ಗನ್ ಬಳಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು ಭದ್ರತಾ ಪಡೆಗಳು ಪೆಲ್ಲೆಟ್ ಗನ್ ಬದಲು ಮಾರಕವಲ್ಲದ ಪರ್ಯಾಯ ಅಸ್ತ್ರಗಳನ್ನು ಬಳಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಇದೇ ವೇಳೆ ಪುಸ್ತಕ, ಕಂಪ್ಯೂಟರ್ಗಳನ್ನು ಬಳಸಬೇಕಾದ ಯುವಕರ ಭವಿಷ್ಯದೊಂದಿಗೆ ಆಟವಾಡಬಾರದು. ಕಾಶ್ಮೀರ ಇಲ್ಲದೇ ಭಾರತದ ಭವಿಷ್ಯ ಅಪೂರ್ಣವಾಗಿದೆ ಎಂದು ರಾಜ್ನಾಥ್ ಸಿಂಗ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.